ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರಾ ಗೃಹ ಸಂಯುಕ್ತ ಆಶ್ರಯದಲ್ಲಿ ಅಕ್ಟೋ ಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾ ರಣಾಧೀನ ಖೈದಿಗಳಿಗೆ ಕಾನೂನು ಸೇವೆ ಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಜಿ. ಬಸವರಾಜ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದು ಶೇಖರ್, ಕಾರ್ಯದರ್ಶಿ ಅರುಣ್ ಕುಮಾರ್, ಜಿಲ್ಲಾ ಕಾರಾಗೃಹದ ಪ್ಯಾನಲ್ ವಕೀಲ ಕೆ.ಬಿ. ವೀರಭದ್ರಸ್ವಾಮಿ ಹಾಗೂ ಎ.ಎಸ್. ಮಂಜುನಾಥಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.