ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ.ಸಿ.ವೇಣುಗೋಪಾಲ್, ನಾಸಿರ್ ಅಹಮದ್
ಮೈಸೂರು

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ.ಸಿ.ವೇಣುಗೋಪಾಲ್, ನಾಸಿರ್ ಅಹಮದ್

September 24, 2018

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿ ಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‍ನ 3 ಸ್ಥಾನಗಳಿಗೆ ಅ. 4ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಸಿರ್ ಅಹಮದ್ ಮತ್ತು ಎಂ.ಸಿ.ವೇಣುಗೋಪಾಲ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಸಮ ನ್ವಯ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಮೂರು ಸ್ಥಾನಗಳ ಪೈಕಿ 2 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಉಳಿದ 1 ಸ್ಥಾನಕ್ಕೆ ಜೆಡಿಎಸ್ ಸ್ಪರ್ಧಿಸಲಿದೆ. ಅದೇ ವೇಳೆ ಮೂರೂ ಸ್ಥಾನಗಳಿಗೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

Translate »