ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ನಿಷ್ಪಕ್ಷಪಾತ ಚುನಾವಣಾ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ

ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ನಿಷ್ಪಕ್ಷಪಾತ ಚುನಾವಣಾ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

June 4, 2018

ಚಾಮರಾಜನಗರ: ‘ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಕಾರ್ಯವನ್ನು ನಿಷ್ಪಕ್ಷಪಾತ ಹಾಗೂ ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ಮೈಕ್ರೋ ಅಬ್ಸರ್ ವರ್‍ಗಳು ಹಾಗೂ ಮತಗಟ್ಟೆ ಅಧಿಕಾರಿ ಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

ಜೂ. 8ರಂದು ನಡೆಯುವ ಮತದಾನ ದಿನದಂದು ಯಾವುದೇ ಸಮಸ್ಯೆ, ಗೊಂದ ಲಕ್ಕೆ ಆಸ್ಪದವಿಲ್ಲದಂತೆ ಕಾರ್ಯನಿರ್ವ ಹಿಸಲು ಸಿದ್ಧರಾಗಿರಬೇಕು. ಮತಗಟ್ಟೆ ಅಧಿಕಾರಿಗಳ ಕಾರ್ಯನಿರ್ವಹಣೆ ಅತ್ಯಂತ ಪ್ರಾಮುಖ್ಯವಾಗಿದೆ. ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಚುನಾವಣಾ ಕೆಲಸವನ್ನು ಹಗುರವಾಗಿ ಪರಿಗಣ ಸಬಾರದು. ಚುನಾವಣೆಯಲ್ಲಿ ಶಿಕ್ಷ ಕರು ಮತದಾರರಾಗಿರುವುದರಿಂದ ಶಿಕ್ಷ ಕರನ್ನು ಚುನಾವಣಾ ಕಾರ್ಯಕ್ಕೆ ನಿಯೋ ಜಿಸಲಾಗಿಲ್ಲ. ಇತರೆ ಇಲಾಖೆಗಳ ಅಧಿ ಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ. ಮೈಕ್ರೋ ಅಬ್ಸರ್ ವರ್‍ಗಳು ಚುನಾವಣಾ ಪ್ರಕ್ರಿಯೆಯನ್ನು ಕೂಲಂಕುಷÀವಾಗಿ ಪರಿಶೀಲಿಸಿ ವೀಕ್ಷಕರಿಗೆ ವರದಿ ಮಾಡಬೇಕು ಎಂದು ತಿಳಿಸಿದರು.

ರಾಜ್ಯಮಟ್ಟದ ಮಾಸ್ಟರ್‍ಟ್ರೈನರ್ ಶ್ರೀನಿ ವಾಸಕುಮಾರ್ ಮಾತನಾಡಿ, ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಸಾರ್ವ ತ್ರಿಕ ಚುನಾವಣೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆ ಅದಕ್ಕಿಂತ ಸ್ವಲ್ಪ ಭಿನ್ನವಾಗಿದೆ. ವಿಧಾನಸಭೆ ಚುನಾ ವಣೆಯಲ್ಲಿ ಪ್ರತಿಯೊಬ್ಬರು ಮತ ಚಲಾ ಯಿಸಿದರೆ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ನೋಂದಾಯಿತ ಶಿಕ್ಷಕರು ಮಾತ್ರ ಮತದಾನ ಮಾಡಲಿದ್ದಾರೆ ಎಂದರು.ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಪ್ರಕ್ರಿ ಯೆಯಲ್ಲಿ ಕಾರ್ಯನಿರ್ವಹಿಸುವ ಪ್ರಿಸೈ ಡಿಂಗ್ ಅಧಿಕಾರಿಗಳು, ಮತಗಟ್ಟೆ ಅಧಿ ಕಾರಿಗಳು ಚುನಾವಣಾ ಆಯೋಗದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಮತದಾರರು ಗುರುತಿನ ಚೀಟಿ ಹೊಂದಿ ರುವುದನ್ನು ಗಮನಿಸಬೇಕು. ಮತ ಚಲಾ ಯಿಸಿದವರ ಎಡಗೈ ಮಧ್ಯದ ಬೆರಳಿಗೆ ಶಾಯಿ ಹಾಕಬೇಕು ಎಂದು ತಿಳಿಸಿದರು.

ಮತದಾನ ದಿನದಂದು ಬೆಳಿಗ್ಗೆ ಅಭ್ಯ ರ್ಥಿಗಳ ವಿವರ ಹೊಂದಿರುವ ಪೋಸ್ಟರ್‍ನ್ನು ಮತದಾನ ಕೇಂದ್ರದ ಹೊರಗಡೆ ಗೋಡೆ ಯಲ್ಲಿ ಅಳವಡಿಸಿರಬೇಕು. ಮತದಾನ ಕೇಂದ್ರದೊಳಗಡೆ ಮೊಬೈಲ್ ಬಳಕೆ ನಿಷೇಧಿ ಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಯಾವುದೇ ಲೋಪಗಳಿಗೆ ಅವಕಾಶವಾಗ ದಂತೆ ಎಚ್ಚರವಹಿಸಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಬಿ.ಫೌಜಿಯಾ ತರನ್ನಮ್, ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈಕ್ರೋ ಅಬ್ಸರ್‍ವರ್ ನೋಡೆಲ್ ಅಧಿಕಾರಿ ಹಾಗೂ ತೋಟಗಾರಿಕೆ ಇಲಾ ಖೆಯ ಉಪನಿರ್ದೇಶಕ ಡಾ.ಆನಂದ್, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಶೀಲ್ದಾರ್ ಸುದರ್ಶನ್ ಹಾಜರಿದ್ದರು.

ಜೂನ್ 8ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ

ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂ. 8ರಂದು ಮತದಾನ ನಡೆಯಲಿದ್ದು, ಮತದಾನದ ಅವಧಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1899 ಅರ್ಹ ಶಿಕ್ಷಕ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಾಯಿತ ಶಿಕ್ಷಕ ಮತದಾರರು ಮಾತ್ರ ಮತ ಚಲಾಯಿಸಬಹುದಾಗಿದೆ. ಕೊಳ್ಳೇಗಾಲ ತಾಲೂಕಿನ ಕಸಬಾ ಮತ್ತು ಪಾಳ್ಯ ಹೋಬಳಿ ವ್ಯಾಪ್ತಿಯ ಮತದಾರರು ಕೊಳ್ಳೇಗಾಲದ ತಾಲೂಕು ಕಚೇರಿ, ಹನೂರು ತಾಲೂಕಿನ ಹನೂರು, ರಾಮಾಪುರ ಮತ್ತು ಲೊಕ್ಕನಹಳ್ಳಿ ವ್ಯಾಪ್ತಿಯ ಮತದಾರರು ಹನೂರಿನ ವಿಶೇಷ ತಹಶೀಲ್ದಾರ್ ಕಚೇರಿಯಲ್ಲಿ ಮತ ಚಲಾಯಿಸಬಹುದಾಗಿರುತ್ತದೆ. ಉಳಿದಂತೆ ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಯಳಂದೂರು ತಾಲೂಕಿನ ಮತದಾರರು ಆಯಾ ತಾಲೂಕು ಕಚೇರಿಗಳಲ್ಲಿ ಸ್ಥಾಪಿತವಾಗಿರುವ ಮತಗಟ್ಟೆಗಳಲ್ಲಿ ಮತದಾನ ಮಾಡ ಬಹುದಾಗಿರುತ್ತದೆ. ಎಂದು ಮಾಹಿತಿ ನೀಡಿದ್ದಾರೆ.

Translate »