ಕುಡಿವ ನೀರಿನ ಸಭೆಗಷ್ಟೇ ಅವಕಾಶ; ಉಳಿದ ಸಭೆ ಮುಂದೂಡಿಕೆ
ಮೈಸೂರು

ಕುಡಿವ ನೀರಿನ ಸಭೆಗಷ್ಟೇ ಅವಕಾಶ; ಉಳಿದ ಸಭೆ ಮುಂದೂಡಿಕೆ

April 21, 2021

ಮೈಸೂರು, ಏ.20(ವೈಡಿಎಸ್)- ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿ ಯುವ ನೀರಿಗೆ ಸಂಬಂಧಿಸಿದ ಸಭೆ ಹೊರತು ಬೇರ್ಯಾವುದೇ ಸಭೆ ನಡೆಸು ವಂತಿಲ್ಲ. ಅಂತಹ ಸಭೆಗಳನ್ನು ತಾತ್ಕಾಲಿಕ ವಾಗಿ ಮುಂದೂಡಬೇಕೆಂದು ಜಿಪಂ ಸಿಇಓಗೆ ಸೂಚಿಸಿದ್ದೇನೆ. ಪಾಲಿಕೆ ವ್ಯಾಪ್ತಿಯ 4 ವಿಧಾನಸಭಾ ಕ್ಷೇತ್ರಗಳಲ್ಲೂ ಕುಡಿಯುವ ನೀರನ್ನು ಹೊರತುಪಡಿಸಿ ಬೇರ್ಯಾವ ಸಭೆ-ಸಮಾರಂಭ ಮಾಡದಂತೆ ತೀರ್ಮಾನಿಸ ಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕ ರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸುವ ಕುರಿತು ಮಂಗಳವಾರ ಸರ್ಕಾರಿ ಅತಿಥಿ ಗೃಹದಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಮಂಗಳವಾರ ಉನ್ನತಾ ಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ದೊಂದಿಗೆ ಮಾತನಾಡಿದರು.
ಮುಂದಿನ 10 ದಿನಗಳಲ್ಲಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬೆಡ್‍ಗಳನ್ನು ಪಡೆದು ಕೊಳ್ಳಲು ತೀರ್ಮಾನಿಸಲಾಗಿದೆ. ಆಕ್ಸಿಜನ್, ವೆಂಟಿಲೇಟರ್ ಬೆಡ್‍ಗಳು ಮತ್ತು ಲಸಿಕೆ ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಕೊಂಡಿದ್ದೇನೆ ಎಂದು ತಿಳಿಸಿದರು.
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿದಿನವೂ ಸಾಮಾನ್ಯ ಹಾಸಿಗೆ, ಆಕ್ಸಿಜನ್ ಸೌಲಭ್ಯದ ಹಾಸಿಗೆ ಹಾಗೂ ವೆಂಟಿಲೇಟರ್ ಲಭ್ಯತೆ ಕುರಿತು ಹಾಗೂ ಇತರೆ ಮಾಹಿತಿ ಗಳನ್ನು ಪ್ರಕಟಿಸಿದರೆ ಜನರ ಆತಂಕ ಕಡಿಮೆ ಯಾಗುತ್ತದೆ ಎಂದು ಸಲಹೆ ನೀಡಿದರು.

ಕೊರೊನಾ ಪ್ರಕರಣಗಳು ಕಳೆದ ಬಾರಿ ಗಿಂತ ವೇಗವಾಗಿ ಹರಡುತ್ತಿದ್ದರೂ ಜನರು ಗಂಭೀರವಾಗಿ ಪರಿಗಣಿಸಿಲ್ಲ. ಸಭೆ-ಸಮಾ ರಂಭಗಳಲ್ಲಿ ಸೀಮಿತ ಸಂಖ್ಯೆ ಜನರು ಭಾಗವಹಿಸುವಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್ ನಿರ್ವಹಣೆಗೆ ಆಗಬೇಕಾದ ಕೆಲಸಗಳನ್ನು ಸರ್ಕಾರದ ವತಿಯಿಂದ ಮಾಡಿಸಿಕೊಡಲಾಗುವುದು. ಲಸಿಕೆ ಮತ್ತಿ ತರೆ ಸೌಲಭ್ಯಗಳನ್ನೂ ಒದಗಿಸಲಾಗು ವುದು. ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡ ಳಿತ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಶಾಸಕ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್‍ಸಿಂಹ, ಮೇಯರ್ ರುಕ್ಮಿಣಿ, ಜಿಲ್ಲಾ ಧಿಕಾರಿ ರೋಹಿಣಿ ಸಿಂಧೂರಿ, ಪೆÇಲೀಸ್ ಆಯುಕ್ತ ಚಂದ್ರಗುಪ್ತ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ವೈದ್ಯ ಕೀಯ ಕಾಲೇಜಿನ ಡೀನ್ ಡಾ.ನಂಜರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವ ಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್. ಸೀತಾಲಕ್ಷ್ಮಿ ಮತ್ತಿತರರು ಸಭೆಯಲ್ಲಿದ್ದರು.

Translate »