ಬಿಜೆಪಿ ನಾಯಕರು ಮೊದಲು ಹೆಣ್ಣಿನ ಶೋಷಣೆ ಮುಕ್ತ ಭಾರತ ಮಾಡಲಿ

ಮೈಸೂರು,ಡಿ.17(ಎಂಟಿವೈ)-ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ಹೇಳುತ್ತಿರುವ ಬಿಜೆಪಿ ನಾಯಕರು `ಹೆಣ್ಣಿನ ಶೋಷಣೆ ಮುಕ್ತ ಭಾರತ’ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಆಗ್ರಹಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ಸಿಕ್ಕುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಒಂದಲ್ಲಾ ಒಂದು ಸ್ಥಳದಲ್ಲಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಇದರಿಂದ ಹೆಣ್ಣು ಮಕ್ಕಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎದುರಾಗಿದೆ. ಅತ್ಯಾಚಾರ, ದೌರ್ಜನ್ಯ ಕಂಡು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ರೇಪ್ ಇನ್ ಇಂಡಿಯಾ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧÀ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಿರ್ಭಯಾ ಪ್ರಕರಣ ವರದಿ ಯಾದಾಗ ಮೋದಿ ಅವರು ದೆಹಲಿ ಇಸ್ ದಿ ರೇಪ್ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೇಳಿಕೆ ನೀಡಿ ದ್ದರು ಎಂದು ವಿಷಾದಿಸಿದರು. ಪ್ರಧಾನಿ ನರೇಂದ್ರ ಮೋದಿ ಹೆಣ್ಣು ಮಕ್ಕಳ ರಕ್ಷಣೆಗೆ ಏನು ಕ್ರಮ ಕೈಗೊಂಡಿದ್ದಾರೆ. ಟ್ವಿಟ್ಟರ್‍ನಲ್ಲಿ ಕ್ರಿಯಾಶೀಲರಾಗಿರುವ ಮೋದಿ ಉನ್ನಾವೋ ಪ್ರಕರಣದ ಕುರಿತು ಅಥವಾ ದೇಶದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಚಕಾರ ಎತ್ತುತ್ತಿಲ್ಲ. ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸುವ ಬಿಜೆಪಿ ನಾಯಕಿಯರು ದೇಶದೆಲ್ಲೆಡೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಕುರಿತು ಏಕೆ ಮಾತನಾಡುತ್ತಿಲ್ಲ. ಕೇಂದ್ರ ಸಚಿವರಾದ ಸ್ಮøತಿ ಇರಾನಿ, ನಿರ್ಮಲಾ ಸೀತಾರಾಮನ್ ಹಾಗೂ ನಮ್ಮ ಕರ್ನಾಟಕದ ಮಹಿಳಾ ಸಂಸದರೇಕೆ ಈ ವಿಚಾರವಾಗಿ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಘೋಷಿಸಿದ್ದರು. ಆದರೆ ಪ್ರಸ್ತುತ ಬಿಜೆಪಿ ನಾಯಕರಿಂದ ಬೇಟಿ ಬಚಾವೋ ಎಂಬಂ ತಾಗಿದೆ. ರಾಮರಾಜ್ಯ ಮಾಡಲು ಬಂದವರು ರಾವಣರಾಜ್ಯ ಮಾಡುತ್ತಿದ್ದಾರೆ. 24 ಅತ್ಯಾಚಾರ ಪ್ರಕರಣಗಳು ಬಿಜೆಪಿ ನಾಯಕರ ಮೇಲಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಿಲುಕಿರುವ ಮುಖಂಡರಿಗೇ ಬಿಜೆಪಿ ಅಧಿಕಾರ ನೀಡುತ್ತಿದೆ ಎಂದು ವಿಷಾದಿಸಿದರು.

ರಾಜ್ಯದ 15 ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸ ದಂತೆ ಪಕ್ಷದ ವರಿಷ್ಠೆ ಸೋನಿಯಾಗಾಂಧಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಗ್ರಾಮಾಂ ತರ ಮಹಿಳಾ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಪುಷ್ಪವಲ್ಲಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಲತಾ ಮೋಹನ್ ಇದ್ದರು.