ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ
ಮೈಸೂರು

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ

September 15, 2019

ಬೆಂಗಳೂರು, ಸೆ.14(ಕೆಎಂಶಿ)- ಕನ್ನಡಿಗರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಬ್ಯಾಂಕಿಂಗ್ (ಐಬಿಪಿಎಸ್)ಪರೀಕ್ಷೆಯಲ್ಲಿ ಕನ್ನಡ ಸೇರಿ 19 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವ ಕಾಶ ಕಲ್ಪಿಸಿದೆ. ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯನ್ನು ಕನ್ನಡ ಸೇರಿದಂತೆ 19 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಬೇಕೆಂದು ಕೇಂದ್ರ ಹಣ ಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಅಧಿಕಾರಿಗಳಿಗೆ ಟ್ವೀಟ್ ಮೂಲಕ ಸೂಚನೆ ಕೊಟ್ಟಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಷ್ಟ್ರೀಕೃತ ಬ್ಯಾಂಕುಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಪ್ರಾದೇ ಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳ 853 ಹುದ್ದೆಗಳಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) ಅರ್ಜಿಗಳನ್ನು ಆಹ್ವಾನಿ ಸಿತ್ತು. ಆಕಾಂಕ್ಷಿಗಳು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಹಾಕಬೇ ಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಕೇಂದ್ರ ಸರ್ಕಾರದ

ಈ ನಿರ್ಧಾರಕ್ಕೆ ಕರ್ನಾಟಕ ಸೇರಿದಂತೆ ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿತ್ತು. ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಬರಹಗಾರರು ಸೇರಿದಂತೆ ಮತ್ತಿತರರು ಪ್ರಾದೇಶಿಕ ಭಾಷೆ ಗಳನ್ನು ಹತ್ತಿಕ್ಕುವ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ದೂರಿದ್ದರು. ಅದರಲ್ಲೂ ಮಾಜಿ ಮುಖ್ಯಮಂತ್ರಿಗಳು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಬೇಡಿ. ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದರು. ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕನ್ನಡ ಭಾಷೆಯಲ್ಲೇ ಪರೀಕ್ಷೆ ಬರೆಯುವುದಕ್ಕೆ ಅನುಮತಿ ಕೊಟ್ಟಿದೆ. ಬ್ಯಾಂಕಿಂಗ್ ಪರೀಕ್ಷೆಗಳನ್ನು ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲೇ ಬರೆಯಬೇಕೆಂಬ ಕಾಯ್ದೆಗೆ ತಿದ್ದುಪಡಿ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಕಳೆದ ಸಂಸತ್‍ನಲ್ಲಿ ಹೇಳಿದ್ದರು. ಆಯಾ ಸ್ಥಳೀಯ ಭಾಷೆಗಳಲ್ಲೇ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಇದರಿಂದ ಪ್ರಾದೇಶಿಕ ಭಾಷೆಗಳಿಗೂ ಉತ್ತೇಜನ ನೀಡಿದಂತಾಗುವುದು. ಅಲ್ಲದೆ, ಸ್ಥಳೀಯ ಭಾಷೆಗಳನ್ನು ಕೇಂದ್ರ ಸರ್ಕಾರ ಕಡೆಗಣಿಸಲಾಗುತ್ತಿದೆ ಎಂಬ ಆಪಾದನೆಯಿಂದ ಮುಕ್ತರಾಗಬಹುದೆಂಬ ಕಾರಣಕ್ಕಾಗಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.

Translate »