ಉ.ಪ್ರ ಸರ್ಕಾರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಮೈಸೂರು ನಗರ-ಜಿಲ್ಲಾ  ಘಟಕದಿಂದ ರಾಷ್ಟ್ರಪತಿಗೆ ಪತ್ರ
ಮೈಸೂರು

 ಉ.ಪ್ರ ಸರ್ಕಾರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಮೈಸೂರು ನಗರ-ಜಿಲ್ಲಾ  ಘಟಕದಿಂದ ರಾಷ್ಟ್ರಪತಿಗೆ ಪತ್ರ

October 4, 2020

ಮೈಸೂರು, ಅ.3(ಪಿಎಂ)- ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಆಗ್ರಹಿಸಿ ಹಾಗೂ ಉತ್ತರ ಪ್ರದೇಶದ ಪರಿಶಿಷ್ಟ ಜಾತಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಅಲ್ಲಿನ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮೈಸೂರು ನಗರ ಹಾಗೂ ಜಿಲ್ಲಾ ಘಟಕದ ನಿಯೋಗ ಶನಿವಾರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಗಳಿಗೆ ಮನವಿಪತ್ರ ಸಲ್ಲಿಸಿತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಭೇಟಿ ಮಾಡಿ 6 ಪುಟಗಳ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು. ಉತ್ತರಪ್ರದೇಶದಲ್ಲಿ ಸಂವಿಧಾನ ಬಿಕ್ಕಟ್ಟು ಉದ್ಭವಿಸಿದೆ. ಅಲ್ಲಿನ ಬಿಜೆಪಿ ಸರ್ಕಾರದ ನಡವಳಿಕೆಗಳು ಜನತಂತ್ರ ವ್ಯವಸ್ಥೆಗೆ ವಿರುದ್ಧವಾಗಿವೆ. ಹೀಗಾಗಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಬೇಕು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಉತ್ತರ ಪ್ರದೇಶ ಪೊಲೀಸರು ದೌರ್ಜನ್ಯ ನಡೆಸಿದ್ದು, ಪೆÇಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ್ ಕುಮಾರ್, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಕಾಂಗ್ರೆಸ್ ಪದಾಧಿಕಾರಿಗಳಾದ ಪೆÇ್ರ.ಶಿವಕುಮಾರ್, ಎಂ.ಶಿವಣ್ಣ, ಉತ್ತನಹಳ್ಳಿ ಶಿವಣ್ಣ, ಅರವಿಂದ್, ನಂಜನಗೂಡು ಮಹೇಶ್, ಮಂಡಕಳ್ಳಿ ಸೋಮು ಮತ್ತಿತರರಿದ್ದರು.

 

 

Translate »