ಕೃಷಿ ಇಲಾಖೆ ಖಾಲಿ ಹುದ್ದೆ ಭರ್ತಿಗೆ ಕೆಪಿಎಸ್‍ಸಿಗೆ ಪತ್ರ
ಮೈಸೂರು

ಕೃಷಿ ಇಲಾಖೆ ಖಾಲಿ ಹುದ್ದೆ ಭರ್ತಿಗೆ ಕೆಪಿಎಸ್‍ಸಿಗೆ ಪತ್ರ

March 10, 2020

ಬೆಂಗಳೂರು, ಮಾ.9(ಕೆಎಂಶಿ)- ಕೃಷಿ ಇಲಾಖೆಯ ಗ್ರೂಪ್-ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಹಾಗೂ ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್, ವಿಧಾನ ಸಭೆ ಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಹೆಚ್.ಡಿ.ರೇವಣ್ಣ ಅವರ ಪ್ರಸ್ತಾವಕ್ಕೆ ಉತ್ತರಿಸಿರುವ ಸಚಿವರು, ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ದಲ್ಲಿರಿಸಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾರದ ಸೌಲಭ್ಯ ಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. 2018-19 ನೇ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು. ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.

Translate »