ಐಎಸ್‍ಐ ಜತೆ ನಂಟು: ಕಾಶ್ಮೀರಿ ಪ್ರತ್ಯೇಕತಾವಾದಿಗಳ ಭದ್ರತೆ ಹಿಂಪಡೆಯಲು ಚಿಂತನೆ
ಮೈಸೂರು

ಐಎಸ್‍ಐ ಜತೆ ನಂಟು: ಕಾಶ್ಮೀರಿ ಪ್ರತ್ಯೇಕತಾವಾದಿಗಳ ಭದ್ರತೆ ಹಿಂಪಡೆಯಲು ಚಿಂತನೆ

February 17, 2019

ಶ್ರೀನಗರ: ಕಾಶ್ಮೀರದ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾ ಗಿದ್ದು, ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮುಂದಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಸೂಚನೆಯಂತೆ ಕಾಶ್ಮೀರ ಗೃಹ ಕಾರ್ಯದರ್ಶಿಗಳು ಪ್ರತ್ಯೇಕತಾವಾದಿಗಳ ಭದ್ರತೆಯನ್ನು ಪರಿಶೀಲಿಸುತ್ತಿದ್ದು, ಐಎಸ್‍ಐ ಜೊತೆಗಿನ ನಂಟು ಪರಿಶೀಲಿಸಿದ ಬಳಿಕ ಭದ್ರತೆ ಹಿಂಪಡೆಯಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Translate »