ಮದ್ಯ ಮಾರಾಟ ನಿಷೇಧ
ಕೊಡಗು

ಮದ್ಯ ಮಾರಾಟ ನಿಷೇಧ

September 21, 2018

ಮಡಿಕೇರಿ:  ವಿರಾಜಪೇಟೆ ಪಟ್ಟಣದಲ್ಲಿ ಗಣೇಶ ಮಂಟಪಗಳ ವಿಸರ್ಜನಾ ಕಾರ್ಯಕ್ರಮದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಸೆಪ್ಟೆಂಬರ್ 22 ರ ಮಧ್ಯ ರಾತ್ರಿ 12 ಗಂಟೆಯಿಂದ ಸೆಪ್ಟೆಂಬರ್ 24 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣ ಮತ್ತು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯೊಳಗೆ ಬರುವ ಗ್ರಾಮಗಳಲ್ಲಿರುವ ಅಬಕಾರಿ ಕಾಯ್ದೆ 1965 ರ ಕಲಂ 21 ರ ಅಧಿಕಾರದಂತೆ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾ ದವುಗಳಲ್ಲಿ ಎಲ್ಲಾ ವಿಧದ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

Translate »