ಲಾಕ್‍ಡೌನ್ ಎಫೆಕ್ಟ್: ಏ.30ರವರೆಗೂ ಬುಕ್ಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ
ಮೈಸೂರು

ಲಾಕ್‍ಡೌನ್ ಎಫೆಕ್ಟ್: ಏ.30ರವರೆಗೂ ಬುಕ್ಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ

April 5, 2020

ನವದೆಹಲಿ, ಏ.4- ಕೊರೊನಾ ನಿಗ್ರಹಕ್ಕೆ ಘೋಷಿಸಲಾಗಿದ್ದ ಏ.14ರವರೆಗಿನ ಎಲ್ಲಾ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಇತ್ತೀಚೆಗೆ ನಿರ್ಬಂಧಿಸಲಾಗಿತ್ತು. ಆದರೆ, ಮಹತ್ವದ ಬೆಳವಣಿಗೆಯೊಂ ದರಲ್ಲಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ತನ್ನ ದೇಶೀಯ ಮತ್ತು ಅಂತರ ರಾಷ್ಟ್ರೀಯ ಹಾರಾಟಗಳಿಗೆ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ಏ.30ರವರೆಗೂ ವಿಸ್ತರಿಸಿದೆ.

ಇದು ಲಾಕ್‍ಡೌನ್ ಅವಧಿಯ ಬಳಿಕವೂ ಮತ್ತೆ ಒಂದು ವಾರದ ಅವಧಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತಷ್ಟು ದಿನಗಳ ಕಾಲ ಎಲ್ಲಾ ರೀತಿಯ ವಿಮಾನಯಾನ ಸೇವೆಗಳನ್ನು ನಿಷೇಧಿಸಬಹುದು ಎಂಬ ವದಂತಿಗಳು ಹರಡಲು ಆರಂಭವಾಗಿದೆ.
ಇಂಡಿಗೋ ವಕ್ತಾರರು ಮಾತನಾಡಿ, ಅಂತರರಾಷ್ಟ್ರೀಯ ವಿಮಾನಗಳ ಬುಕ್ಕಿಂಗ್ ಗಳನ್ನು ನಿಷೇಧಿಸಲಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿನ ವಾಣಿಜ್ಯ ವಿಮಾನಗಳನ್ನು ಏಪ್ರಿಲ್ 14ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಏರ್ ಇಂಡಿಯಾ ವಕ್ತಾರ ಮಾತನಾಡಿ, ಏಪ್ರಿಲ್ 3ರಿಂದ ಏಪ್ರಿಲ್ 30ರವರೆಗೂ ಎಲ್ಲಾ ವಿಮಾನ ಬುಕ್ಕಿಂಗ್‍ಗಳನ್ನು ನಿಷೇಧಿಸಲಾಗಿದೆ. ಏಪ್ರಿಲ್ 14ರ ಬಳಿಕ ವಿಮಾನಯಾನ ಸಚಿ ವಾಲಯದ ನಿರ್ಧಾರದ ಕುರಿತು ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

Translate »