ಕೊಡಗಿನಲ್ಲಿ ಲಾಕ್‍ಡೌನ್ ಸಡಿಲಿಕೆ; ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ವಾಣಿಜ್ಯ ವಹಿವಾಟು
ಕೊಡಗು

ಕೊಡಗಿನಲ್ಲಿ ಲಾಕ್‍ಡೌನ್ ಸಡಿಲಿಕೆ; ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ವಾಣಿಜ್ಯ ವಹಿವಾಟು

July 10, 2021

ಮಡಿಕೇರಿ, ಜು.9- ಕೊಡಗು ಜಿಲ್ಲೆಯಲ್ಲೂ ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಬಹುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಈ ಆದೇಶ ಜು.19ರ ಬೆಳಗಿನ 6 ಗಂಟೆಯ ವರೆಗೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಲಾಕ್‍ಡೌನ್ ನಿಯಮವನ್ನು ಇತರ ಜಿಲ್ಲೆಗಳಂತೆ ಸಡಿಲಿಕೆ ಮಾಡಿದೆ. ಅದರಂತೆ ನಿರ್ಬಂಧಿತ ಪ್ರದೇಶ ಗಳಲ್ಲಿ ಯಾವುದೇ ಸಡಿಲಿಕೆ ಇಲ್ಲ. ಅಲ್ಲಿ ಕೋವಿಡ್ ನಿಯಮ ಗಳು ಕಟ್ಟನಿಟ್ಟಾಗಿ ಮುಂದುವರೆಯಲಿದೆ ಎಂದು ಹೇಳಿದರು.

ವರದಿ ಕಡ್ಡಾಯ: ಕೇರಳ ರಾಜ್ಯದ ಮೂಲಕ ಕೊಡಗು ಜಿಲ್ಲೆ ಪ್ರವೇಶಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಅಥವಾ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವ ದಾಖಲಾತಿ ಹೊಂದಿರ ಬೇಕು. ಅಂತಹ ವ್ಯಕ್ತಿಗಳಿಗೆ ಮಾತ್ರವೇ ಕೊಡಗು ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಈ ಬಗ್ಗೆ ತಾಲೂಕು ತಹಶೀಲ್ದಾರರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಈ ದಾಖಲಾತಿ ಇಲ್ಲದವರನ್ನು ಗಡಿಯಿಂದ ಹೊರ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಇನ್ನು ಸರಕಾರದ ನಿರ್ದೇಶನದಂತೆ ಲಾಕ್‍ಡೌನ್ ನಿಯಮದ ಸಡಿಲಿಕೆಯಿಂದ ಕೊಡಗು ಜಿಲ್ಲೆಯ ಪ್ರವಾ ಸೋದ್ಯಮ ಕೂಡ ಮುಕ್ತವಾಗಿದೆ. ಕೆಲವು ನಿರ್ಬಂಧಿತ ಚಟುವಟಿಕೆಗಳ್ನು ಹೊರತುಪಡಿಸಿದರೆ, ಹೋಂಸ್ಟೇ, ರೆಸಾರ್ಟ್, ಲಾಡ್ಜ್‍ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿದರು.

ಬಸ್ ಆರಂಭ: ಕೋವಿಡ್ ಲಾಕ್‍ಡೌನ್ ನಿಯಮಗಳನ್ನು ಪಾಲಿಸಿ ಕೊಂಡು ರಾಜ್ಯಾದ್ಯಂತ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಪ್ರಾರಂಭಿಸಲಾ ಗಿದೆ ಎಂದು ಪುತ್ತೂರು ಡಿಪೋ ಮಾಹಿತಿ ನೀಡಿದೆ. ಅಂತರ್ ರಾಜ್ಯ ಸಂಚಾರವನ್ನು ಹೊರತುಪಡಿಸಿ ರಾಜ್ಯದಲ್ಲಿ ಈ ಹಿಂದಿನಂತೆ ಬಸ್ ಸಂಚಾರ ಇರಲಿದೆ. ಆದರೆ ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ. ಪ್ರಯಾಣಿಕರು ಕೂಡ ಸಹಕರಿಸುವಂತೆ ಕೋರಲಾಗಿದೆ.

Translate »