ಜೂನ್ 25ರಂದು ರಾಷ್ಟಿçÃಯ ಲೋಕ ಅದಾಲತ್
ಮೈಸೂರು

ಜೂನ್ 25ರಂದು ರಾಷ್ಟಿçÃಯ ಲೋಕ ಅದಾಲತ್

May 28, 2022

ಮೈಸೂರು, ಮೇ ೨೭(ಆರ್‌ಕೆ)- ಜೂನ್ ೨೫ರಂದು ರಾಜ್ಯಾದ್ಯಂತ ರಾಷ್ಟಿçÃಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್. ರಘುನಾಥ ತಿಳಿಸಿದ್ದಾರೆ.

ಮೈಸೂರಿನ ಕಟ್ಟೆಮಳಲವಾಡಿಯಲ್ಲಿರುವ ನೂತನ ನ್ಯಾಯಾಲಯಗಳ ಕಟ್ಟಡದ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲೆ ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ೨೨,೦೦೦ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಲು ಉದ್ದೇಶಿಸಲಾಗಿದೆ ಎಂದರು.

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಕಾರ್ಮಿಕ ವ್ಯಾಜ್ಯ, ಚೆಕ್ ಬೌನ್ಸ್, ಮೋಟಾರು ಅಪಘಾತ ಪರಿಹಾರ, ಭೂಸ್ವಾಧೀನ, ವೇತನ, ಭತ್ಯೆ, ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಉಭಯತ್ರರ ರಾಜೀ ಸಂಧಾನದ ಮೂಲಕ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾ ಗುವುದು ಎಂದು ಅವರು ತಿಳಿಸಿದರು.

ನ್ಯಾಯಾಲಯದಲ್ಲಿ ದಾಖಲಾಗದಿರುವ ಪ್ರಕರಣಗಳನ್ನೂ ಬಗೆಹರಿಸಿಕೊಳ್ಳಲು ಅವಕಾಶವಿದ್ದು, ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಸಲಾಗುವುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನವಾಗುವುದರಿಂದ ಸಾರ್ವಜನಿಕರು ಲೋಕ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕೆಂದು ನ್ಯಾಯಾಧೀಶರು ತಿಳಿ ಹೇಳಿದರು.

ಕಳೆದ ಬಾರಿ ನಡೆದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ೫೩ ವರ್ಷದ ಹಳೇ ಕೇಸು ಸೇರಿ ಒಟ್ಟು ೫೪,೦೦೦ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲಾಗಿತ್ತು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಟೋಲ್ ಫ್ರೀ ನಂಬರ್ ೧೮೦೦-೪೨೫-೦೧೩೧ಗೆ ಕರೆ ಮಾಡಬಹುದು ಎಂದು ರಘುನಾಥ್ ತಿಳಿಸಿದರು.
ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ ಭೂತೆ, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಂ. ಮಹದೇವಸ್ವಾಮಿ ಹಾಗೂ ಕಾರ್ಯದರ್ಶಿ ಎಸ್. ಉಮೇಶ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Translate »