ಲೋಕಸಭಾ ಚುನಾವಣೆ: ಸೆಕ್ಟರ್ ಅಧಿಕಾರಿಗಳಿಗೆ ತರಬೇತಿ
ಕೊಡಗು

ಲೋಕಸಭಾ ಚುನಾವಣೆ: ಸೆಕ್ಟರ್ ಅಧಿಕಾರಿಗಳಿಗೆ ತರಬೇತಿ

January 31, 2019

ಮಡಿಕೇರಿ: ಲೋಕಸಭಾ ಚುನಾ ವಣೆಯ ಅಧಿಸೂಚನೆಯು ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಈಗಿ ನಿಂದಲೇ ಮಾಡಿಕೊಳ್ಳಬೇಕಿದೆ. ಆದ್ದರಿಂದ ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳ ಬಗ್ಗೆ ಮಾಹಿತಿಯನ್ನು ಫೆ.5 ರೊಳಗೆ ಒದಗಿ ಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾ ವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಸಂಬಂಧ ಆರಂಭದಿಂದ ಕೊನೆಯ ತನಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿನದಾ ಗಿದೆ. ಆದ್ದರಿಂದ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಮನ್ವ ಯತೆಯಿಂದ ಕಾರ್ಯ ನಿರ್ವಹಿಸಬೇಕು. ಜೊತೆಗೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾ ಧಿಕಾರಿ ಅವರು ನಿರ್ದೇಶನ ನೀಡಿದರು.

ಸೆಕ್ಟರ್ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ವೀಕ್ಷಣೆಗೆ ತೆರಳುವ ಸಂದ ರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾ ರಿಗಳು ಜೊತೆಗಿದ್ದು ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡವರು, ಸ್ಥಳಾಂತರವಾಗಿರು ವವರ ಬಗ್ಗೆ ಪ್ರತಿ ಬೂತ್‍ಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು ಎಂದು ಅವರು ನಿರ್ದೇ ಶನ ನೀಡಿದರು. ಉಪ ವಿಭಾಗಾಧಿಕಾರಿ ಟಿ. ಜವರೇಗೌಡ ಅವರು ಮತಗಟ್ಟೆ ವ್ಯಾಪ್ತಿ ಯಲ್ಲಿ ದೂರವಾಣಿ ಸಂಪರ್ಕ ಇದೆಯೇ? ಇಲ್ಲವೇ ಎಂಬ ಬಗ್ಗೆ ಮಾಹಿತಿ ಒದಗಿಸ ಬೇಕು. ಚುನಾವಣೆ ಸಂಬಂಧ ಕಾಲ ಕಾಲಕ್ಕೆ ಅಗತ್ಯ ಮಾಹಿತಿ ನೀಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣಾ ತರಬೇತಿದಾರರಾದ ಷಂಶುದ್ಧೀನ್ ಅವರು ಮತಗಟ್ಟೆ ಕೇಂದ್ರಗ ಳಲ್ಲಿ ರ್ಯಾಂಪ್ ಇರಬೇಕು. ಕುಡಿಯುವ ನೀರು, ಅಗತ್ಯ ಪೀಠೋಪಕರಣ, ರಸ್ತೆ ಸಂಪರ್ಕ, ಶೌಚಾಲಯ, ಗಾಳಿ ಬೆಳಕು ವ್ಯವಸ್ಥೆ, ಕಟ್ಟಡ ಸುಸ್ಥಿತಿಯಲ್ಲಿದೆಯೇ ಮತ್ತಿತರ ಮೂಲ ಸೌಲಭ್ಯಗಳು ಇವೆಯೇ ಎಂಬುದರ ಬಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ತಿಳಿಸಿ ದರು. ಸೆಕ್ಟರ್ ಅಧಿಕಾರಿಗಳು ಚುನಾವಣೆ ಸಂಬಂಧ ಅಗತ್ಯ ಮಾಹಿತಿ ಪಡೆದರು.

Translate »