ನಂಜರಾಜ ಬಹದ್ದೂರ್ ಛತ್ರದಲ್ಲಿ ಇವಿಎಂ, ವಿವಿ ಪ್ಯಾಟ್ ಯಂತ್ರಗಳು
ಮೈಸೂರು

ನಂಜರಾಜ ಬಹದ್ದೂರ್ ಛತ್ರದಲ್ಲಿ ಇವಿಎಂ, ವಿವಿ ಪ್ಯಾಟ್ ಯಂತ್ರಗಳು

March 12, 2019

ಮೈಸೂರು: ಮೈಸೂರು ಜಿಲ್ಲೆಯ ಲೋಕಸಭಾ ಚುನಾವಣಾ ಮತಗಟ್ಟೆಗಳಿಗೆ ಒದಗಿಸುವ ಇವಿಎಂ ಮತ್ತು ವಿವಿ ಪ್ಯಾಟ್‍ಗಳನ್ನು ಮೈಸೂರಿನ ನಂಜರಾಜ ಬಹದ್ದೂರ್ ವೇರ್‍ಹೌಸ್‍ನಲ್ಲಿ ಇರಿಸಲಾಗಿದೆ.

ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮರಾ ಕಣ್ಗಾವಲು ಮಾಡಲಾಗಿದ್ದು, ಬಿಇಎಲ್ ಕಂಪನಿಯಿಂದ ಮೊದಲ ಹಂತದ ಪರೀಕ್ಷೆ ನಡೆಸಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಣಕು ಮತದಾನದ ಮೂಲಕ ಇವಿಎಂ ಮತ್ತು ವಿವಿ ಪ್ಯಾಟ್‍ಗಳ ಕಾರ್ಯಕ್ಷಮತೆ ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದೆ.

ಸಿಸಿ ಕ್ಯಾಮರಾಗಳ ಮೂಲಕ ಯಂತ್ರ ಗಳನ್ನು ವೀಕ್ಷಿಸಲು ನಂಜರಾಜ ಬಹದ್ದೂರ್ ಛತ್ರದಲ್ಲಿ ಕಂಪ್ಯೂಟರ್ ಕೇಂದ್ರವನ್ನು ತೆರೆದು ವೀಕ್ಷಿಸಲು ವ್ಯವಸ್ಥೆ ಮಾಡಿರುವುದಲ್ಲದೆ, ಗೋದಾಮಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Translate »