ಲೋಕಸಭಾ ಚುನಾವಣೆ; ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯ
ಕೊಡಗು

ಲೋಕಸಭಾ ಚುನಾವಣೆ; ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯ

April 17, 2019

ಮಡಿಕೇರಿ: ಲೋಕಸಭಾ ಚುನಾ ವಣೆ ಸಂಬಂಧ ಜಿಲ್ಲೆಯ ಎರಡು ವಿಧಾ ನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಮತದಾನಕ್ಕೆ ಮುನ್ನ ದಿನವಾದ ಬುಧ ವಾರ ನಗರದ ಸಂತ ಜೋಸೆಫರ ಶಾಲೆ ಮತ್ತು ವಿರಾಜಪೇಟೆ ಸರ್ಕಾರಿ ಜೂನಿ ಯರ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಮಸ್ಟ ರಿಂಗ್ ಕಾರ್ಯ ನಡೆಯಿತು.

ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಗಳ ಒಟ್ಟು 543 ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳು ತಲು ಪಿದ್ದು, ನಾಳೆ (ಏ.18) ನಡೆಯುವ ಮತ ದಾನಕ್ಕೆ ಸಿದ್ಧತೆ ಪೂರ್ಣಗೊಂಡಿದೆ.

ನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಯಾದ ಉಪ ವಿಭಾಗಾಧಿಕಾರಿ ಟಿ.ಜವರೇ ಗೌಡ ಅವರ ಮೇಲ್ವಿಚಾರಣೆಯಲ್ಲಿ ಹಾಗೂ ವಿರಾಜಪೇಟೆಯಲ್ಲಿ ವಿರಾಜ ಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಅವರ ಮೇಲ್ವಿಚಾರಣೆಯಲ್ಲಿ ಹಾಗೂ ವಿರಾಜ ಪೇಟೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಮಡಿ ಕೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವ ರಾಜು ಅವರ ಉಪಸ್ಥಿತಿಯಲ್ಲಿ ಮಸ್ಟರಿಂಗ್ ಕಾರ್ಯ ಸುಗಮವಾಗಿ ನಡೆಯಿತು.

ನಗರದ ಸಂತ ಜೋಸೆಫರ ಕಾಲೇಜು ಮತ್ತು ವಿರಾಜಪೇಟೆಯ ಸರ್ಕಾರಿ ಜೂನಿ ಯರ್ ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ ಯಿಂದಲೇ ಚುನಾವಣಾ ಕಾರ್ಯದಲ್ಲಿ ನಿಯೋಜಿತರಾಗಿರುವ ಮತಗಟ್ಟೆ ಅಧಿ ಕಾರಿಗಳು, ಸಹಾಯಕ ಮತಗಟ್ಟೆ ಅಧಿ ಕಾರಿಗಳು, ಪೋಲಿಂಗ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಮಾವಣೆಗೊಂಡು ಅತ್ಯಂತ ಅಚ್ಚುಕಟ್ಟಾಗಿ ತಮ್ಮ ತಮ್ಮ ಜವಾ ಬ್ದಾರಿಗಳನ್ನು ನಿರ್ವಹಿಸಿದರು.

ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂದಿ üಸಿದಂತೆ ಸಮರೋಪಾದಿಯಲ್ಲಿ ಚುನಾ ವಣಾಧಿಕಾರಿಗಳು ಕಾರ್ಯ ನಿರ್ವಹಿಸಿ ದರು. ಮತಗಟ್ಟೆಗಳಿಗೆ ತೆರಳುವ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿ ಕಾರಿಗಳು, ಪೋಲಿಂಗ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ಮಾಹಿತಿ ನೀಡಲು ಪ್ರತ್ಯೇ ಕವಾಗಿ ಕೌಂಟರ್‍ಗಳನ್ನು ತೆರೆಯಲಾಗಿತ್ತು. ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸುಗ ಮವಾಗಿ ತಮ್ಮ ತಮ್ಮ ಮತಗಟ್ಟೆಗಳಿಗೆ ತಂಡಗಳೊಂದಿಗೆ ತೆರಳಲು ಅನುಕೂಲ ವಾಗುವಂತೆ ನಾಮಫಲಕಗಳಲ್ಲಿ ವಿವರ ಗಳನ್ನು ಪ್ರಕಟಿಸಲಾಗಿತ್ತು. ಅಲ್ಲದೆ ಪ್ರತ್ಯೇಕ ಕೌಂಟರ್‍ಗಳನ್ನು ತೆರೆದು ಪಿಆರ್‍ಒ, ಎಪಿಆರ್‍ಒ ಮತ್ತು ಪೋಲಿಂಗ್ ಅಧಿ ಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿತ್ತು.
ನಗರದ ಸಂತ ಜೋಸೆಫರ ಕಾಲೇಜು ಮತ್ತು ವಿರಾಜಪೇಟೆಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿಂದು ನಡೆದ ಮಸ್ಟರಿಂಗ್ ಕಾರ್ಯದಲ್ಲಿ ಎಲ್ಲಿ ನೋಡಿ ದರೂ ಅಧಿಕಾರಿ ಮತ್ತು ಸಿಬ್ಬಂದಿಗಳು ಮತಯಂತ್ರ ಹಾಗೂ ಚುನಾವಣಾ ಸಾಮಗ್ರಿಗಳನ್ನು ಹಿಡಿದು ವಾಹನಗಳತ್ತ ಸಾಗುವ ದೃಶ್ಯ ಕಂಡುಬಂದಿತು.

ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವ್ಯೂವಿಂಗ್, ವಿಡಿಯೋ ಸರ್ವಿಲೆನ್ಸ್, ಚೆಕ್ ಪೋಸ್ಟ್, ಸೆಕ್ಟರ್ ಅಧಿಕಾರಿಗಳು, ಮೈಕ್ರೋ ವೀಕ್ಷಕರು, ಸಂಚಾರಿ ಅಧಿಕಾರಿಗಳ ತಂಡ ಗಳನ್ನು ನಿಯೋಜಿಸಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಪೊಲೀ ಸರು ಮತ್ತು ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ಬಂದೋಬಸ್ತ್ ಕಲ್ಪಿಸಿ ಮತದಾರರು ನಿರ್ಭೀತಿಯಿಂದ ಮತ ಹಕ್ಕು ಚಲಾಯಿಸಲು ಕ್ರಮವಹಿಸಲಾಗಿದೆ. ಇದಲ್ಲದೆ ಜಿಲ್ಲಾ ಶಸಸ್ತ್ರ ಪಡೆ, ಪ್ರತಿ ಮತ ಗಟ್ಟೆಗಳಲ್ಲಿ ಪೊಲೀಸ್ ಅಥವಾ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸ ಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಸುಮನ್ ಡಿ.ಪೆನ್ನೇಕರ್ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆ ಯಲ್ಲಿ ಮೂವರು ಡಿವೈಎಸ್‍ಪಿ, 36 ಪೊಲೀಸ್ ಇನ್ಸ್‍ಪೆಕ್ಟರ್‍ಗಳು, 1200 ಪೊಲೀಸ್ ಸಿಬ್ಬಂದಿ ಗಳು, 500 ಗೃಹರಕ್ಷಕ ದಳದ ಸಿಬ್ಬಂದಿ, ಸಶಸ್ತ್ರ ಪಡೆಗಳಾದ ಬಿಎಸ್‍ಎಫ್, ಡಿಎಆರ್, ಕೆಎಸ್‍ಆರ್‍ಪಿ ನಿಯೋಜಿಸಲಾಗಿದೆ. ಜೊತೆಗೆ ಚೀತಾ ಮೊಬೈಲ್ ತಂಡಗಳನ್ನು ನಿಯೋ ಜಿಸಲಾಗಿದೆ. ಎಸ್‍ಎಫ್‍ಟಿ, ಎಫ್‍ಎಸ್‍ಟಿ ಜೊತೆಗೆ ಕಾರ್ಯ ನಿರ್ವಹಿಸಲು ಪೊಲೀಸ್ ತಂಡ ನಿಯೋಜಿಸಲಾಗಿದೆ. ಹಾಗೆಯೇ 49 ಸೆಕ್ಟರ್ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂತರರಾಜ್ಯ ಗಡಿ ಪ್ರದೇಶ ಹಾಗೂ ಚೆಕ್‍ಪೋಸ್ಟ್‍ಗಳಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ ಎಂದರು.
ಲೋಕಸಭಾ ಚುನಾವಣೆಯ ಮತ ದಾನವು ಏಪ್ರಿಲ್ 18 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

Translate »