ಕರ್ನಾಟಕದಲ್ಲಿ ಏ.18, ಏ.23ರಂದು ಚುನಾವಣೆ
ಮೈಸೂರು

ಕರ್ನಾಟಕದಲ್ಲಿ ಏ.18, ಏ.23ರಂದು ಚುನಾವಣೆ

March 11, 2019

ಬೆಂಗಳೂರು: 17ನೇ ಲೋಕಸಭಾ ಚುನಾ ವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ದೇಶದಲ್ಲಿ 7 ಹಂತಗಳಲ್ಲಿ ಚುನಾ ವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಯು ಏ.18ರಂದು ಮತ್ತು ಎರಡನೇ ಹಂತದ ಚುನಾವಣೆ ಏ.23ರಂದು ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ಹೇಳಿದರು.

ಇಂದು ಸಂಜೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಿದ್ದು, ಅದರಲ್ಲಿ 5 ಪರಿಶಿಷ್ಟ ಜಾತಿ ಮೀಸಲು ಮತ್ತು ಎರಡು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಾಗಿವೆ ಎಂದು ಹೇಳಿದರು.

ಏ.18ರಂದು ಮೈಸೂರು-ಕೊಡಗು, ಚಾಮರಾಜ ನಗರ, ಹಾಸನ, ಮಂಡ್ಯ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂ ತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗ ಳೂರು ಸೆಂಟ್ರಲ್, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಮಾ.19ರಂದು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಮಾ.26 ಕೊನೆಯ ದಿನವಾಗಿದೆ. ಮಾ.27 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ.29 ನಾಮ ಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದರು.

ಏ.23ರಂದು ಚಿಕ್ಕೋಡಿ, ಹಾವೇರಿ-ಗದಗ, ಧಾರ ವಾಡ, ರಾಯಚೂರು, ಕಲಬುರಗಿ, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಬೀದರ್, ಬಾಗಲಕೋಟೆ, ವಿಜಯಪುರ ಮತ್ತು ಬೆಳಗಾವಿ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಏ.4 ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏ.8 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದರು.

ರಾಜ್ಯದಲ್ಲಿ ಒಟ್ಟು 5,03,46,721 ಮತದಾರರಿದ್ದು, ಅವರ ಪೈಕಿ 2,54,94,711 ಪುರುಷರು, 2,48,47,292 ಮಹಿಳೆಯರು ಹಾಗೂ 4718 ಇತರರು ಮತದಾನದ ಹಕ್ಕನ್ನು ಹೊಂದಿದ್ದಾರೆ ಎಂದರು. ರಾಜ್ಯದಲ್ಲಿ 56,176 ಮತಗಟ್ಟೆ ಗಳನ್ನು ಸ್ಥಾಪನೆ ಮಾಡಲಿದ್ದು, ಅದರಲ್ಲಿ 600 ಮಹಿಳಾ ಮತಗಟ್ಟೆಗಳು ಮತ್ತು 28 ವಿಶೇಷಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇದೇ ಮೊದಲ ಬಾರಿಗೆ ವಿಶೇಷ ಚೇತನ ಮತದಾರರ ಮನೆಗೆ ವ್ಹೀಲ್ ಚೇರ್ ಮತ್ತು ವಾಹನದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವೃದ್ಧರು ಮತ್ತು ಅಂಗವಿಕ ಲರಿಗೆ ಮತಗಟ್ಟೆಗೆ ಬರಲು ಪಿಕಪ್ ಮತ್ತು ಡ್ರಾಪ್ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಈ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಚಿವರು, ಶಾಸಕರು ಸೇರಿದಂತೆ ಯಾವುದೇ ಜನಪ್ರತಿನಿಧಿಗಳು ಸರ್ಕಾರಿ ವಾಹನ ಗಳನ್ನು ಬಳಸುವಂತಿಲ್ಲ. ಯಾವುದೇ ರೀತಿಯ ಯೋಜನೆ ಗಳನ್ನು ಪ್ರಕಟಿಸುವಂತಿಲ್ಲ ಎಂದು ಹೇಳಿದ ಅವರು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಚುನಾವಣೆ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಮತದಾನದ ಹಕ್ಕು ದೊರೆಯಲಿದೆ. ಎಪಿಕ್ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ 23 ದಾಖಲೆಗಳನ್ನು ತೋರಿಸಿ ಮತ ಚಲಾ ಯಿಸಬಹುದಾಗಿದೆ ಎಂದರು. ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹೆಲ್ಪ್ ಲೈನ್ ಸ್ಥಾಪಿಸಲಾಗಿದ್ದು, ಸಂಖ್ಯೆ 1950ಕ್ಕೆ ಕರೆ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಹಾಗೂ ಮತಕೇಂದ್ರದ ಬಗ್ಗೆ ವಿವರಗಳನ್ನು ಪಡೆಯಬಹುದು ಎಂದರು. ಇದೇ ಮೊದಲ ಬಾರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ಸಾರ್ವಜನಿಕರು ಆಯೋಗಕ್ಕೆ ದೂರು ಸಲ್ಲಿಸಲು ವಿಶೇಷವಾಗಿ ಆ್ಯಪ್ ಸ್ಥಾಪಿಸಲಾಗಿದೆ. ಈ ಆ್ಯಪ್ ಮೂಲಕ ಸಾರ್ವಜನಿಕರು ನೇರವಾಗಿ ಆಯೋಗಕ್ಕೆ ದೂರು ಸಲ್ಲಿಸಬಹುದು. ದೂರು ಸಲ್ಲಿಸಿದವರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ಹೇಳಿದರು.

Translate »