ಲೋಕಸಭಾ ಚುನಾವಣೆ: ಮತ ಎಣಿಕೆಗೆ ಮುಂಚೆ ವಿವಿ ಪ್ಯಾಟ್ ಸ್ಲಿಪ್ ಎಣಿಕೆಗೆ ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ
ಮೈಸೂರು

ಲೋಕಸಭಾ ಚುನಾವಣೆ: ಮತ ಎಣಿಕೆಗೆ ಮುಂಚೆ ವಿವಿ ಪ್ಯಾಟ್ ಸ್ಲಿಪ್ ಎಣಿಕೆಗೆ ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ

May 23, 2019

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ವಿಪಕ್ಷಗಳು ಫಲಿತಾಂಶಕ್ಕೆ ಮುನ್ನ ವಿವಿ ಪ್ಯಾಟ್ ಕಾಗದಗಳನ್ನು ಸಂಪೂರ್ಣವಾಗಿ ಲೆಕ್ಕ ಹಾಕಬೇಕೆಂದು ಬೇಡಿಕೆ ಇಟ್ಟಿದ್ದವು. ಆದರೆ ಚುನಾವಣಾ ಆಯೋಗವು ಬೇಡಿಕೆಯನ್ನು ತಿರಸ್ಕರಿಸಿದ್ದು, ಮತ ಎಣಿಕೆಯ ಕಡೇ ಕ್ಷಣದ ತಯಾರಿ ನಡೆದಿರುವಾಗ ಕಾರ್ಯವಿಧಾನದಲ್ಲಿ ಯಾವ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದಿದೆ. 22 ರಾಜಕೀಯ ಪಕ್ಷಗಳ ನಾಯಕರು ಫಲಿತಾಂಶಕ್ಕೆ ಮುನ್ನ ವಿವಿ ಪ್ಯಾಟ್ ಸ್ಲಿಪ್‍ಗಳನ್ನು ಎಣಿಕೆ ಮಾಡಿ ಖಚಿತಪಡಿಸಿಕೊಳ್ಳಬೇಕೆಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಒಂದೊಮ್ಮೆ ಏನಾದರೂ ವ್ಯತ್ಯಾಸಗಳು ಕಂಡು ಬಂದರೆ ಅಂತಹ ಲೋಕಸಭೆ ಕ್ಷೇತ್ರದ ಎಲ್ಲಾ ಮತಗಳನ್ನು ಸಹ ಮತ್ತೊಮ್ಮೆ ಕ್ರಾಸ್ ಚೆಕ್ ಮಾಡಬೇಕು ಎಂದು ಆಗ್ರಹಿಸಿದೆ. ಇದಕ್ಕೂ ಮುನ್ನ ಮಂಗಳವಾರ ಸುಪ್ರೀಂಕೋರ್ಟ್ ವಿವಿ ಪ್ಯಾಟ್‍ಗಳ ಶೇ.100 ತಾಳೆಯನ್ನು ಗಮನಿಸಿ ಫಲಿತಾಶ ನಿಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತ್ತು. ಅದೆಲ್ಲದರ ನಡುವೆ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹ ಇವಿಎಂ ಬಗೆಗಿನ ಪ್ರತಿಪಕ್ಷದ ವಾದಗಳನ್ನು ತಳ್ಳಿ ಹಾಕಿದ್ದು ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದ್ದರು.

Translate »