ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಆಸಿಡ್ ದಾಳಿ
ಮೈಸೂರು

ಬೆಂಗಳೂರಲ್ಲಿ ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಆಸಿಡ್ ದಾಳಿ

April 29, 2022

ಬೆಂಗಳೂರು, ಏ.೨೮- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ೨೪ ವರ್ಷದ ಯುವತಿ ಮೇಲೆ ಆಸಿಡ್ ದಾಳಿ ನಡೆದಿದ್ದು, ತನ್ನನ್ನು ಪ್ರೀತಿಸಲು ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿ ಈ ಕೃತ್ಯ ಎಸಗಿದ್ದಾನೆ. ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ನಾಗೇಶ್ ಎಂಬಾತ ಈ ದಾಳಿ ನಡೆಸಿದ್ದಾನೆ. ಯುವತಿ ನಾಗೇಶ್‌ನ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ನಿನ್ನೆ ಸಂಜೆಯೂ ಯುವತಿ ಹಾಗೂ ನಾಗೇಶ್ ನಡುವೆ ಗಲಾಟೆ ನಡೆದಿತ್ತು.

ಅದೇ ದ್ವೇಷದಿಂದ ಇಂದು ಆಕೆ ಕೆಲಸಕ್ಕೆ ಹೋಗುವ ಸಂದರ್ಭ ದಲ್ಲಿ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್, ಬೆಳಗ್ಗೆ ೮.೩೦ರಿಂದ ೮.೪೫ರ ಸುಮಾರಿಗೆ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ಆಸಿಡ್ ದಾಳಿ ನಡೆದಿದೆ. ಯುವತಿಯ ಕತ್ತು, ಬೆನ್ನು, ತಲೆ ಭಾಗಕ್ಕೆ ಗಾಯವಾಗಿದೆ. ಗಾಯಾಳು ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯುವತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಆರೋಪಿ ನಾಗೇಶ್ ಬಂಧನಕ್ಕೆ ತಂಡ ರಚನೆ ಮಾಡಲಾಗಿದೆ ಎಂದರು. ಬೆಳಗ್ಗೆ ೮.೩೦ರಲ್ಲಿ ಕಚೇರಿಗೆ ಕೆಲಸಕ್ಕೆ ಬಂದಾಗ ಅಲ್ಲಿಗೆ ನಾಗೇಶ್ ಬಂದಿದ್ದಾನೆ. ಆತನನ್ನು ಕಂಡು ಯುವತಿ ಓಡಿ ಹೋಗಿದ್ದಾಳೆ. ಅವಳನ್ನು ಬೆನ್ನತ್ತಿದ ಈ ರಾಕ್ಷಸ, ಹಿಂದಿನಿAದ ಆಸಿಡ್ ಎರಚಿದ. ನಂತರ ಕೆಳಗೆ ಬಿದ್ದ ಆಕೆ ಮೇಲೆ ಮತ್ತೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಕಚೇರಿಯ ಗೋಡೆಗಳು ಆ್ಯಸಿಡ್ ದಾಳಿಯಿಂದ ಹಾಳಾಗಿವೆ. ಪ್ಲೀಸ್, ಅವನನ್ನು ಬಿಡಬೇಡಿ. ಅವನಿಗೆ ಶಿಕ್ಷೆಯಾಗಲೇ ಬೇಕು ಎಂದು ಆಸಿಡ್ ದಾಳಿಗೆ ಒಳಗಾದ ಯುವತಿ ಪೊಲೀಸರಲ್ಲಿ ಮನವಿ ಮಾಡಿದ್ದಾಳೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಅವನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾಳೆ. ಯುವತಿಯ ಹೇಳಿಕೆ ಪಡೆದ ಪೊಲೀಸರು ನಾಗೇಶ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿ ನಾಗೇಶ್ ಯುವತಿ ಮೇಲೆ ಆಸಿಡ್ ಹಾಕಿದ ಬಳಿಕ ವಕೀಲರನ್ನು ಭೇಟಿ ಮಾಡುವ ಉದ್ದೇಶ ದಿಂದ ನಾಗೇಶ್, ಸಿಟಿ ಸಿವಿಲ್ ಕೋರ್ಟ್ ಬಳಿ ಹೋಗಿದ್ದಾನೆ. ಅಲ್ಲಿಂದ ತನ್ನ ಫೋನ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ. ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಾಗಿ ಹುಡುಕಾಡುತ್ತಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

 

Translate »