ಲುಲು ಗ್ರೂಪ್‌ನಿಂದ ರಾಜ್ಯದಲ್ಲಿ ೨ ಸಾವಿರ ಕೋಟಿ ಹೂಡಿಕೆ
ಮೈಸೂರು

ಲುಲು ಗ್ರೂಪ್‌ನಿಂದ ರಾಜ್ಯದಲ್ಲಿ ೨ ಸಾವಿರ ಕೋಟಿ ಹೂಡಿಕೆ

May 24, 2022

ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಜೊತೆ ಒಪ್ಪಂದಕ್ಕೆ ಸಹಿ

೧೦ ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷೆ

ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮೆ.ಲುಲು ಗ್ರೂಪ್ ಇಂಟರ್ ನ್ಯಾಷನಲ್ ನಿರ್ದೇಶಕ ಎ.ವಿ.ಅನಂತರಾಮನ್(ಮುಖ್ಯಮAತ್ರಿಗಳ ಜೊತೆ ಮಾತನಾಡುತ್ತಿರುವುದು) ಮತ್ತಿತರರೊಂದಿಗೆ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಚರ್ಚೆ ನಡೆಸಿದರು.

ಬೆಂಗಳೂರು, ಮೇ ೨೩- ಕರ್ನಾಟಕ ದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಹಲವು ಉದ್ಯಮಿಗಳು ಮತ್ತು ಕಂಪನಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಮೊದಲ ದಿನ ಕೆಲ ಉದ್ಯಮಿಗಳಿಗೆ ಬಂಡ ವಾಳ ಹೂಡಲು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಂದ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಲುಲು ಗ್ರೂಪ್ ಕರ್ನಾಟಕದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆಗೆ ಮುಂದಾಗಿದೆ. ೪ ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫುö್ತ ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ ೧೦ ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಹೊಂದಲಾಗಿದೆ.

ಲುಲು ಗ್ರೂಪ್ ಇಂಟರ್ ನ್ಯಾಷನಲ್‌ನ ನಿರ್ದೇಶಕ ಎ.ವಿ.ಅನಂತ ರಾಮನ್ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಜೊತೆಗೆ ಹೀರೋ ಮೋಟೋಕಾರ್ಪ್ನ ಅಧ್ಯಕ್ಷ ಹಾಗೂ ಸಿಇಒ ಪವನ್ ಮುಂಜಲ್ ಜತೆ ಚರ್ಚೆ ನಡೆಸಿದ್ದಾರೆ. ಹಲವು ಹೂಡಿಕೆ ಯೋಜನೆಗಳಿಗೂ ಸಹಿ ಹಾಕಿದ್ದಾರೆ. ಕರ್ನಾಟಕದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣ ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಾಥ್ ನೀಡಿದ್ದಾರೆ.

ವಿಶ್ವದ ಪ್ರಮುಖ ಸಂಸ್ಥೆಗಳೊAದಿಗೆ ಸಿಎಂ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು.

ಕರ್ನಾಟಕ ಸರ್ಕಾರದಿಂದ ಭರವಸೆ: ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬAಧಿಸಿದAತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.

ರಾಜ್ಯದ ವಾಣ ಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯ ಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Translate »