ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಗೆ ಆದರ್ಶ ಜಿಪಂ ಅಧ್ಯಕ್ಷರಾದ ಎಂ.ಅಶ್ವಿನಿ ಅಭಿಮತ
ಚಾಮರಾಜನಗರ

ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಗೆ ಆದರ್ಶ ಜಿಪಂ ಅಧ್ಯಕ್ಷರಾದ ಎಂ.ಅಶ್ವಿನಿ ಅಭಿಮತ

October 24, 2020

ಚಾಮರಾಜನಗರ, ಅ.23-ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ತೋರಿದ ಧೈರ್ಯ, ಸಾಹಸ ಹಾಗೂ ಆತ್ಮವಿಶ್ವಾಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕೆÀ್ಷ ಎಂ.ಅಶ್ವಿನಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಸರಳವಾಗಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ, ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರಾಣಿ ಚೆನ್ನಮ್ಮ ಅವರು ರಾಜ ಮನೆತನದವರಾಗಿದ್ದರಿಂದ ಬಾಲ್ಯದಿಂದಲೇ ಕುದುರೆ ಸವಾರಿ, ಕತ್ತಿ ವರಸೆ ತರಬೇತಿ ಪಡೆದಿದ್ದರು. ಚನ್ನಮ್ಮ ತನ್ನ ರಾಜ್ಯ ರಕ್ಷಣೆÉಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ. ಹಾಗಾಗಿ ಅವರ ಜನ್ಮದಿನವನ್ನು ಕಿತ್ತೂರಿನ ವಿಜಯೋತ್ಸವದ ದಿನ ಎಂದು ಆಚರಿಸಲಾಗುತ್ತದೆ ಎಂದರು.

ಚೆನ್ನಮ್ಮ ಅವರ ಜೀವನ ಮತ್ತು ಹೋರಾಟ ನಾಡಿನ ಪ್ರತಿಯೊಬ್ಬ ಮಹಿಳೆಯರಿಗೂ ಸ್ಫೂರ್ತಿದಾಯಕ. ಮಹಿಳೆಯರು ಸ್ವಾವಲಂಬಿಗಳಾಗಿ ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಹೋರಾಡುವಂತಹ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಎಂ.ಅಶ್ವಿನಿ ಸಲಹೆ ನೀಡಿದರು.

ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತನಾಡಿ, ಸ್ವಾತಂತ್ರ ಪೂರ್ವ ಮತ್ತು ನಂತರದ ದಿನಗಳಿಂದಲೂ ಮಹಿಳೆಯರು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಿದ್ದು, ವಿಶಿಷ್ಟ ಸ್ಥಾನ-ಮಾನ ಪಡೆದುಕೊಂಡಿದ್ದಾರೆ. ಅವರಲ್ಲಿ ಪ್ರಮುಖವಾಗಿ ಕಿತ್ತೂರಿನ ರಾಣಿ ಚೆನ್ನಮ್ಮ ಅವರು ಬ್ರಿಟಿಷ್ ಸರ್ಕಾರದ ವಿರುದ್ಧ ಹೋರಾಟ ನಡೆಸಿ ದೇಶ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದರು ಎಂದು ಸ್ಮರಿಸಿದರು.

ಮುಖಂಡ ಮಹದೇವಸ್ವಾಮಿ ಮಾತನಾಡಿ, ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಧೀರ ದಿಟ್ಟ ಮಹಿಳೆ ರಾಣಿ ಚೆನ್ನಮ್ಮ. ದೇಶದ ಜನ ತಾವಿರುವ ಪ್ರದೇಶದಲ್ಲಿ ಗೌರವದಿಂದ ಬದುಕ ಬೇಕಾದರೇ ಸ್ವಾತಂತ್ರ್ಯ ಬಹಳ ಮುಖ್ಯ ಎಂದು ತಿಳಿದಿದ್ದ ಚೆನ್ನಮ್ಮ, ಅಲ್ಲಿನ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದರು ಎಂದÀು ತಿಳಿಸಿದರು.

ಮುಖಂಡ ಅರಕಲವಾಡಿ ನಾಗೇಂದ್ರ ಮಾತನಾಡಿ, ಬ್ರಿಟಿಷ್ ಸರ್ಕಾರವು ಜಾರಿಗೊಳಿಸಿದಂತಹ `ದತ್ತು ಮಕ್ಕಳಿಗೆ ಹಕ್ಕಿಲ್ಲ’ ಕಾಯ್ದೆ ವಿರೋಧಿಸಿದ ರಾಣಿ ಚೆನ್ನಮ್ಮ ಅವರು, ಬ್ರಿಟಿಷರಿಗೆ ನೀಡಬೇಕಾಗಿದ್ದ ಕಪ್ಪ ಕಾಣಿಕೆ ನಿರಾಕರಿಸಿದ ವೀರ ಮಹಿಳೆ. ಇವರಲ್ಲಿದ್ದ ಛಲ, ಧೈರ್ಯ ಹಾಗೂ ಆತ್ಮವಿಶ್ವಾಸ ನಾಡಿನ ಪ್ರತಿ ಮಹಿಳೆಯೂ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಜಿಪಂ ಉಪ ಕಾರ್ಯದರ್ಶಿ ಧರಣೇಶ್, ತಹಸೀಲ್ದಾರ್ ಚಿದನಂದ ಗುರುಸ್ವಾಮಿ, ನಗರಾಭಿವೃದ್ಧಿ ಕೋಶದ ನಿರ್ದೇಶಕ ಕೆ.ಸುರೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್, ಜೈ ಭುವನೇಶ್ವರಿ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು, ಕನ್ನಡ ಚಳುವಳಿಗಾರ ನಿಜಧ್ವನಿ ಗೋವಿಂದರಾಜು, ಮುಖಂಡರಾದ ಬಸವನಪುರದ ರಾಜಶೇಖರ್, ಬ್ಯಾಡಮೂಡ್ಲೂ ಬಸವಣ್ಣ, ಬಿ.ಕೆ.ರವಿಕುಮಾರ್, ನಟೇಶ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಮಹಿಳಾ ಸಂಘ ಸಂಸ್ಥೆಯ ಪ್ರತಿನಿಧಿಗಳು, ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಕಾರ್ಯಕ್ರಮಲ್ಲಿದ್ದರು.

Translate »