ಮಧ್ಯ ಪ್ರದೇಶ ಮುಖ್ಯಮಂತ್ರಿ   ಕಮಲ್‍ನಾಥ್ ರಾಜೀನಾಮೆ
ಮೈಸೂರು

ಮಧ್ಯ ಪ್ರದೇಶ ಮುಖ್ಯಮಂತ್ರಿ  ಕಮಲ್‍ನಾಥ್ ರಾಜೀನಾಮೆ

March 21, 2020

ಭೋಪಾಲ್: ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ ಜಿ ಟಂಡನ್ ಶುಕ್ರವಾರ ಅಂಗೀಕರಿಸಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಬೃಹನ್ನಾಟಕಕ್ಕೆ ತೆರೆ ಬಿದ್ದಿದೆ.

ಇಂದು ಸಂಜೆಯ ವೇಳೆಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಕಮಲ್‍ನಾಥ್ ಅವರಿಗೆ ಗುರುವಾರ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ಬಂಡಾಯ ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಹಿನ್ನೆಲೆ ಯಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ಹೀಗಾಗಿ ಕಮಲ್ ನಾಥ್ ಅವರು ವಿಶ್ವಾಸಮತಕ್ಕೂ ಮುನ್ನವೇ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

ಕಮಲ್‍ನಾಥ್ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಅವರಿಗೆ ಸೂಚಿಸ ಲಾಗಿದೆ ಎಂದು ರಾಜಭವನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಬಿಜೆಪಿ ಸೇರಿಕೊಂಡ ನಂತರ ಅವರ ಬೆಂಬಲಿಗ 22 ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕಮಲ್ ನಾಥ್ ರಾಜೀನಾಮೆ ನೀಡಿದ್ದು, 15 ತಿಂಗಳ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಇನ್ನು ಕಮಲ್ ನಾಥ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಇದು ಜನರ ಗೆಲುವು ಎಂದು ಹೇಳಿದ್ದಾರೆ. ರಾಜಕೀಯ ಜನರ ಸೇವೆ ಮಾಡುವ ಮಾಧ್ಯಮವಾಗಬೇಕು. ಆದರೆ ಕಮಲ್ ನಾಥ್ ನೇತೃತ್ವದ ಸರ್ಕಾರ ಹಾದಿ ತಪ್ಪಿತ್ತು. ಸತ್ಯ ಮೇಲುಗೈ ಸಾಧಿಸಿದೆ ಎಂದು ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಇಂದು ರಾಜೀನಾಮೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಕಮಲ್ ನಾಥ್ ಅವರು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಳೆದ 15 ತಿಂಗಳ ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ದೂರಿದರು.

ತಮ್ಮ ಪಕ್ಷಕ್ಕೆ ಸೇರಿದ ಶಾಸಕರನ್ನು ಕರ್ನಾಟಕದಲ್ಲಿ ಬಂಧಿಸಿಡ ಲಾಗಿದೆ. 5 ವರ್ಷಗಳ ಕಾಲ ಅಧಿಕಾರ ನಡೆಸಲು ತಮಗೆ ಜನಾ ದೇಶ ನೀಡಿದ್ದರೂ ಬಿಜೆಪಿ ಅದರ ವಿರುದ್ಧ ಪಿತೂರಿ ನಡೆಸಿ, ನಮ್ಮ ಶಾಸಕರನ್ನು ಬಿಜೆಪಿ ನಾಯಕರು ನೂರಾರು ಕೋಟಿ ರೂಪಾಯಿಗಳಿಗೆ ಖರೀದಿಸಿದ್ದಾರೆ ಎಂದು ಆರೋಪಿಸಿದರು.

ಚೌಹಾಣ್ ಹೆಸರು ಮುಂಚೂಣಿಯಲ್ಲಿ: ಮಧ್ಯಪ್ರದೇಶದಲ್ಲಿ ಕಮಲ್‍ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳ್ಳು ತ್ತಿದ್ದಂತೆಯೇ ಬಿಜೆಪಿ ರಚನೆ ಮಾಡುವ ಸರ್ಕಾರಕ್ಕೆ ಸಾರಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ.

ಕೇಂದ್ರ ಸಚಿವ ನರೇಂದ್ರ ಸಿಂಗ್ ಥೋಮಾರ್ ಹಾಗೂ ಮಧ್ಯಪ್ರದೇಶದ ಮಾಜಿ ಸಚಿವ ನರೋತ್ತಮ್ ಮಿಶ್ರಾ ಅವರ ಹೆಸರುಗಳು ಸಿಎಂ ರೇಸ್‍ನಲ್ಲಿ ಕೇಳಿಬರುತ್ತಿವೆ. ಆದಾಗ್ಯೂ ಮಧ್ಯ ಪ್ರದೇಶದ ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿದೆ.

ಸರ್ಕಾರ ರಚನೆ ಪ್ರಕ್ರಿಯೆಗೂ ಮುನ್ನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಶೀಘ್ರವೇ ನಡೆಯಲಿದ್ದು, ಮುಖ್ಯಮಂತ್ರಿ ಯಾರಾ ಗಬೇಕೆಂಬುದರ ಬಗ್ಗೆ ಈವರೆಗೂ ಹೈಕಮಾಂಡ್‍ನಿಂದ ಸ್ಪಷ್ಟ ನಿರ್ದೇ ಶನ ಲಭ್ಯವಾಗಿಲ್ಲ. ಚೌಹಾಣ್ ಅವರಿಗೆ ಇರುವ ಜನಪ್ರಿಯತೆ, ಆರ್‍ಎಸ್‍ಎಸ್‍ನೊಂದಿಗಿನ ಉತ್ತಮ ಸಂಬಂಧ, ಹಾಗೂ 2018ರಲ್ಲಿ ಆಡಳಿತ ವಿರೋಧಿ ಅಲೆಯ ನಡುವೆಯೂ ಕಾಂಗ್ರೆಸ್‍ಗೆ ನೀಡಿದ ಪೈಪೆÇೀಟಿಯ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಮಧ್ಯ ಪ್ರದೇಶ ಸಿಎಂ ಸ್ಥಾನಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಅವರೇ ಅತ್ಯುತ್ತಮ ಆಯ್ಕೆ ಎಂಬ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗುತ್ತಿದೆ.

ಕಾಂಗ್ರೆಸ್ ಸರ್ಕಾರ ಪತನಕ್ಕೆ ಕಾರಣವಾಗಿರುವ 22 ಶಾಸಕರ ರಾಜೀನಾಮೆಯಿಂದ ತೆರವುಗೊಂಡಿರುವ ಕ್ಷೇತ್ರಗಳಿಗೆ ಉಪಚುನಾ ವಣೆ ನಡೆಯಬೇಕಿದ್ದು, ಈ ಉಪಚುನಾವಣೆ ಮುನ್ನಡೆಸಲು ಶಿವರಾಜ್ ಸಿಂಗ್ ಚೌಹಾಣ್ ಸೂಕ್ತ ವ್ಯಕ್ತಿ ಎಂಬುದು ಪಕ್ಷದಲ್ಲಿರುವ ಹಲವು ನಾಯಕರ ಅಭಿಪ್ರಾಯವಾಗಿದೆ.

Translate »