ಮಹದಾಯಿ ನೀರು ಹಂಚಿಕೆ ವಿಚಾರ ಸದ್ಯದಲ್ಲೇ ಸರ್ವಪಕ್ಷ ಸಭೆ
ಮೈಸೂರು

ಮಹದಾಯಿ ನೀರು ಹಂಚಿಕೆ ವಿಚಾರ ಸದ್ಯದಲ್ಲೇ ಸರ್ವಪಕ್ಷ ಸಭೆ

September 15, 2018

ಬೆಂಗಳೂರು:  ಮಹದಾಯಿ ನದಿ ವಿವಾದ ಸಂಬಂಧ ರಾಜ್ಯದ ನಿಲುವು ಕುರಿತು ಚರ್ಚಿಸಲು ಸದ್ಯದಲ್ಲೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಾಧೀಕರಣ ತೀರ್ಪು ನೀಡಿದೆ, ಕಾನೂನು, ನೀರಾವರಿ ತಜ್ಞರು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಚರ್ಚಿಸಿ ಸರ್ಕಾರ ಕೈಗೊಳ್ಳಬೇಕಿರುವ ನಿರ್ಧಾರದ ಬಗ್ಗೆ ಸಲಹೆ ಪಡೆಯಲಾಗಿದೆ ಎಂದರು.

ನೀರಾವರಿ ಹಾಗೂ ಕಾನೂನು ತಜ್ಞರ ಸಲಹೆ ಆಧರಿಸಿ ಸರ್ವ ಪಕ್ಷ ಸಭೆಯಲ್ಲಿ ಚರ್ಚಿಸಿ ರಾಜ್ಯ ಸರ್ಕಾರ ನಿಲುವು ತಳೆಯಬೇಕೆಂಬ ಬಗ್ಗೆ ನಿರ್ಧರಿಸಲಾಗುವುದು ಎಂದರು.

Translate »