ಸಂಭ್ರಮದ ಮಹದೇಶ್ವರ ಜಾತ್ರಾ ಮಹೋತ್ಸವ
ಹಾಸನ

ಸಂಭ್ರಮದ ಮಹದೇಶ್ವರ ಜಾತ್ರಾ ಮಹೋತ್ಸವ

March 24, 2019

ಗ್ರಾಮಸ್ಥರಿಂದ ಕೋಡಿ ಮಠದ ಶ್ರೀಗಳಿಗೆ ಭಿಕ್ಷಾಟನೆಯ ಗೌರವ
ಅರಸೀಕೆರೆ: ತಾಲೂಕಿನ ಸುಕ್ಷೇತ್ರ ಶ್ರೀ ಕೋಡಿಮಠ ಮಹಾ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಾರನಹಳ್ಳಿ ಗ್ರಾಮಸ್ಥರು ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತು ಮಠದ ಉತ್ತರಾಧಿಕಾರಿ ಚೇತನ್ ಮರಿದೇವರು ಅವರಿಗೆ ಭಿಕ್ಷಾಟನೆ ನೀಡಿ ಗೌರವ ಸಮರ್ಪಣೆ ಮಾಡಿದರು.

ಕಳೆದ ಎರಡು ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ಪ್ರಮುಖ ಧಾರ್ಮಿಕ ಕಾರ್ಯ ಕ್ರಮ ಭಿಕ್ಷಾಟನೆಯು ಪ್ರತಿ ವರ್ಷದಂತೆ ಈ ವರ್ಷವು ಶ್ರೀಗಳಿಬ್ಬರೂ ಹಾರನಹಳ್ಳಿ ಗ್ರಾಮಕ್ಕೆ ಪುರ ಪ್ರವೇಶ ಮಾಡಿದಾಗ ಗ್ರಾಮಸ್ಥರು ಅಭೂತ ಪೂರ್ವ ಸ್ವಾಗತ ವನ್ನು ಕೋರಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪೀಠಾಧ್ಯಕ್ಷ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತನಾಡಿ, ಅನಾದಿ ಕಾಲದಿಂದಲೂ ಮಠ ಮಾನ್ಯಗಳು ಭಿಕ್ಷಾಟನೆ ಮಾಡುವು ದರ ಮೂಲಕ ಭಕ್ತರು ಅರ್ಪಿಸುವ ವಿವಿಧ ರೀತಿಯ ಅರ್ಪಣೆಗಳನ್ನು ಮಠಕ್ಕೆ ಬರುವ ಭಕ್ತಾದಿಗಳಿಗೆ ಅನ್ನದಾಸೋಹ, ನಿರ್ವಹಣೆ ಮತ್ತು ಸಾಮಾಜಿಕ ಏಳಿಗೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಕೊಳ್ಳಲಾಗುತ್ತಿದೆ ಎಂದರು.

ಮಠದ ಉತ್ತರಾಧಿಕಾರಿ ಚೇತನ್ ಮರಿ ದೇವರು ಮಾತನಾಡಿದರು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೆಳ ಗಾವಿ ನಿಡಸೂಸಿ ಶ್ರೀ ಸಿದ್ದಸಂಸ್ಥಾನ ಮಠದ ಶ್ರೀ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಘಟಪ್ರಭ ಶ್ರೀ ಕೆಂಪಯ್ಯಸ್ವಾಮಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಭದ್ರಾ ವತಿ ತಾ.ಶೀಲಸಂಪಾದನ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ಹಾನಗಲ್ ತಾಲೂಕು ಬೊಮ್ಮನಹಳ್ಳಿ ವಿರಕ್ತ ಮಠದ ಶ್ರೀ ಶಿವಯೋಗಿ ಸ್ವಾಮೀಜಿಯವರು ಉಪ ಸ್ಥಿತರಿದ್ದು, ಆಶೀರ್ವಚನ ನೀಡಿದರು. ರಾತ್ರಿ ಮಹದೇಶ್ವರ ಬೆಟ್ಟದಲ್ಲಿ ಸಿದ್ದಲಿಂಗ ಸ್ವಾಮೀಜಿಯವರಿಗೆ ಭಕ್ತ ವೃಂದವು ಪಾದ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ವಿಶ್ವ ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ, ಅಖಿಲ ಭಾರತ ವೀರ ಶೈವ ಮಹಾಸಭಾದ ಅಧ್ಯಕ್ಷ ಎಂ.ಎಸ್. ನಟರಾಜ್, ಶ್ರೀಮಠದ ವ್ಯವಸ್ಥಾಪಕ ದಕ್ಷಿಣಾಮೂರ್ತಿ, ಸಂಚಾಲಕ ಮಲ್ಲಿಕಾ ರ್ಜುನ, ನಿತ್ಯ ದಾಸೋಹ ಸಮಿತಿ ಕಾರ್ಯ ದರ್ಶಿ ಸಿದ್ದೇಶ್ ನಾಗೇಂದ್ರ ಮತ್ತು ಚನ್ನ ಬಸವಯ್ಯ ಸೇರಿದಂತೆ ಇನ್ನಿತರರಿದ್ದರು.

Translate »