ಮಹಾರಾಷ್ಟ್ರ ಗಡಿ ಬಂದ್
ಮೈಸೂರು

ಮಹಾರಾಷ್ಟ್ರ ಗಡಿ ಬಂದ್

May 23, 2020

ಬೆಂಗಳೂರು, ಮೇ 22-ಮುಂಬೈನಿಂದ ರಾಜ್ಯ ಪ್ರವೇಶಿ ಸುತ್ತಿರುವ ಬಹುತೇಕರಿಗೆ ಕೊರೊನಾ ಸೋಂಕು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿ ಬಂದ್ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಹಿರಿಯ ಅಧಿಕಾರಿ ಗಳ ಜೊತೆ ಸಮಾಲೋಚನೆ ಹಾಗೂ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭ ಮಹಾ ರಾಷ್ಟ್ರದಿಂದ ಬಂದ ಬಹುತೇಕರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿರುವ ಪರಿಣಾಮ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ವಿಪರೀತ ಏರುತ್ತಿದೆ ಎಂಬುದನ್ನು ಮನಗಂಡ ಮುಖ್ಯಮಂತ್ರಿಗಳು, ಈ ಆದೇಶ ಹೊರಡಿಸಿದರು.

ವೀಡಿಯೋ ಕಾನ್ಫರೆನ್ಸ್‍ನಲ್ಲಿ ಮಂಡ್ಯ ಮತ್ತು ಚಿಕ್ಕಬಳ್ಳಾ ಪುರ ಜಿಲ್ಲಾಧಿಕಾರಿಗಳು ಮಾತನಾಡುತ್ತಾ, ಮುಂಬೈನಿಂದ ಬರುತ್ತಿರುವವರು ಜಿಲ್ಲಾಡಳಿತಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದ್ದಾರೆ. ಮುಂಬೈ, ಅಹಮದಾಬಾದ್ ಮತ್ತು ತೆಲಂ ಗಾಣದಿಂದ ರಾಜ್ಯ ಪ್ರವೇಶಿಸುತ್ತಿರುವ ಬಹುತೇಕರಲ್ಲಿ ಸೋಂಕು ಕಂಡು ಬಂದಿದೆ. ಅದರಲ್ಲೂ ಮುಂಬೈ ಕೊಳಚೆ ಪ್ರದೇಶದಿಂದ ಬಂದವರಂತೂ ಸೋಂಕು ಹಚ್ಚಿಕೊಂಡೇ ಬರುತ್ತಿರುವುದು ಖಚಿತವಾಗಿದೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿರುವವರೇ ಸರ್ಕಾ ರಕ್ಕೆ ತಲೆನೋವಾಗಿದ್ದಾರೆ. ಆದ್ದರಿಂದ ಮುಂಬೈನಿಂದ ರಾಜ್ಯಕ್ಕೆ ಯಾರೂ ಬರಲು ಅನುಮತಿ ನೀಡಬಾರದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮುಂದಿನ ಆದೇಶ ದವರೆಗೆ ಮಹಾರಾಷ್ಟ್ರದಿಂದ ಯಾರೂ ಕರ್ನಾಟಕಕ್ಕೆ ಬರಲು ಅನುಮತಿ ನೀಡಬಾರದು ಎಂದು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸರ್ಕಾರದ ಆದೇಶ ಧಿಕ್ಕರಿಸಿ ಅನುಮತಿ ಇಲ್ಲದೇ ಗಡಿ ನುಸುಳಿದರೆ, ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿದರು. ವಿಶೇಷ ಪ್ರಕರಣಗಳಲ್ಲಿ ಯಾರಿಗಾದರೂ ರಾಜ್ಯ ಪ್ರವೇಶಕ್ಕೆ ಅನುಮತಿ ನೀಡಿದರೆ ಅವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಬೇಕು. ಹೀಗೆ ಕ್ವಾರಂಟೈನ್ ಆದವರು ತಮ್ಮ ಊರುಗಳಿಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ಸೂಚಿಸಿದರು.

ಇನ್ನು ಮುಂದೆ ಯಾವುದೇ ಗ್ರಾಮಕ್ಕೆ ಹೊಸಬರು ಪ್ರವೇಶಿಸಿದರೆ ಅಂತಹವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದೆ. ಹೊಸಬರು ಬಂದ ತಕ್ಷಣ ಮಾಹಿತಿ ಪಡೆದು ಪೊಲೀಸರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಮಹಾರಾಷ್ಟ್ರ ಗಡಿ ಬಂದ್ ಮಾಡಲು ಮುಖ್ಯಮಂತ್ರಿಗಳು ಆದೇಶಿಸಿರುವುದನ್ನು ಖಚಿತಪಡಿಸಿದರು. ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮುಂಬೈನಿಂದ ಬಂದವರಿಗೆ ಕೊರೊನಾ ಸೋಂಕು ಕಂಡು ಬರುತ್ತಿದೆ. ಈ ಕಾರಣದಿಂದಲೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದರ ಬಗ್ಗೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿಗಳಿಗೆ ವಿವರಿಸಲಾಯಿತು. ಮುಂಬೈನಿಂದ ವಲಸಿಗರು ಬರಲು ಅನುಮತಿ ನೀಡಬಾರದು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದೆವು. ಈ ಸಂಬಂಧ ಮುಖ್ಯಮಂತ್ರಿ ಗಳು, ಇತರ ಸಚಿವರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಮುಂದಿನ ಆದೇಶದವರೆಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಲು ಯಾರಿಗೂ ಅನುಮತಿ ನೀಡಬಾರದು ಎಂದು ಆದೇಶಿಸಿದ್ದಾರೆ ಎಂದು ಡಾ.ವೆಂಕಟೇಶ್ ತಿಳಿಸಿದರು.

Translate »