ಮಕ್ಕಳ ಆರೋಗ್ಯ ಕಾಪಾಡಿ

ಬೆಂಗಳೂರು, ಜ. 18- ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

18 ಜಿಲ್ಲೆಗಳ ಡಿಸಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಇಂದು ಕೊರೊನಾ ಲಸಿಕಾ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ತಾಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆ ಬಗ್ಗೆ ಪರಿಶೀಲಿಸಬೇಕು, ಪರಿ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಮೇಲ್ವಿ ಚಾರಣೆ ಕೈಗೊಳ್ಳಲು ಸೂಚಿಸಲಾಯಿತು.

ಜಿಲ್ಲಾಡಳಿತ ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟ ಕಡೆಯ ಮನೆಗೂ ಔಷಧ ಕಿಟ್‍ಗಳನ್ನು ತಲುಪಿಸಬೇಕು, ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು, ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪ್ರಾರಂಭಿಸಿ, ವೈದ್ಯರು ಮನೆ ಮನೆಗೆ ಭೇಟಿ ನೀಡಬೇಕು. ಇದಕ್ಕೆ ವಿಶೇಷ ಮಾರ್ಗಸೂಚಿ ರೂಪಿಸಲು ನಿರ್ಧರಿಸ ಲಾಯಿತು. ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರು ವುದರಿಂದ ಕೋ-ಮಾರ್ಬಿಡಿಟಿ ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್‍ನಲ್ಲಿರುವವರಿಗೆ ಪರೀಕ್ಷೆ ಮಾಡಿ ಚಿಕಿತ್ಸೆ ನೀಡುವಂತೆ ಸಲಹೆ ನೀಡಲಾಯಿತು. ಮೊದಲನೇ ಹಾಗೂ 2ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ರಾಜ್ಯ ಸರಾಸರಿಯನ್ನು ತಲುಪಬೇಕು. ಶೇ.94ರಷ್ಟು ಸೋಂಕಿತರು ಹೋಮ್ ಐಸೋಲೇಷನ್ ನಲ್ಲಿ ಇರುವುದರಿಂದ ಮನೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರೆಗೂ ಪರೀಕ್ಷೆ ಮಾಡಿ ಅಗತ್ಯವಿದ್ದರೆ ಚಿಕಿತ್ಸೆ ನೀಡಬೇಕು, ಕೋ-ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಬೇಕು ಮತ್ತು ಔಷಧ ಒದಗಿಸಬೇಕು ಎಂದು ನಿರ್ದೇಶಿಸಲಾಯಿತು. ರಾಜ್ಯದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೋವಿಡ್ ಮೂರನೇ ಅಲೆ ಏರುಗತಿ ತಲುಪಿದರೂ ಆತಂಕಪಡದೆ ಯಶಸ್ವಿಯಾಗಿ ಮೂರನೇ ಅಲೆ ನಿಭಾಯಿಸಬಹುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.