ಮಾನವ ಹಕ್ಕುಗಳ ಜಾಗೃತಿ ಮೂಡಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಕರೆ
ಚಾಮರಾಜನಗರ

ಮಾನವ ಹಕ್ಕುಗಳ ಜಾಗೃತಿ ಮೂಡಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಕರೆ

December 11, 2018

ಚಾಮರಾಜನಗರ: ಮಾನವ ಹಕ್ಕುಗಳ ಮಹತ್ವದ ಬಗ್ಗೆ ಪರಿಣಾಮ ಕಾರಿಯಾಗಿ ಅರಿವು ಮೂಡಿಸಿದರೆ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟ ಬಹುದೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣ ದಲ್ಲಿ ಇಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗ ದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನಾತ್ಮಕವಾಗಿ ಲಭಿಸಿರುವ ಹಕ್ಕುಗಳ ರಕ್ಷಣೆ ಬಗ್ಗೆ ತಿಳಿವಳಿಕೆ ಮೂಡಿಸ ಬೇಕಿದೆ. ಈ ಹಕ್ಕುಗಳ ಉಲ್ಲಂಘನೆಯಾ ದಾಗ ಯಾವ ಪರಿಹಾರ ಕ್ರಮಗಳಿಗೆ ಮುಂದಾಗಬೇಕೆಂಬ ಜಾಗೃತಿ ಸಹ ವ್ಯಾಪಕವಾಗಿ ಉಂಟು ಮಾಡಬೇಕಾಗಿದೆ. ಅನಕ್ಷರಸ್ಥರಿಗೂ ಹಕ್ಕುಗಳ ಕುರಿತು ಪರಿಣಾಮಕಾರಿಯಾಗಿ ತಿಳಿಸಿಕೊಡುವ ಕೆಲಸ ಮಾಡಬೇಕಿದೆ ಎಂದು ಜಿಲ್ಲಾಧಿ ಕಾರಿಯವರು ತಿಳಿಸಿದರು.

ಸಂವಿಧಾನಬದ್ಧವಾಗಿ ಪ್ರತಿಯೊಬ್ಬರಿಗೂ ನೀಡಲಾಗಿರುವ ಸ್ವಾತಂತ್ರ್ಯ ಹಕ್ಕುಗಳು, ರಕ್ಷಣೆ ಮಾಡುವುದು ಪ್ರಮುಖ ಕರ್ತವ್ಯ ವಾಗಿದೆ. ಲಿಂಗ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನತೆಯ ಹಕ್ಕು ನೀಡಲಾಗಿದೆ. ಶಿಕ್ಷಣ, ಆರೋಗ್ಯ, ವಾಕ್ ಸ್ವಾತಂತ್ರ್ಯ ಸೇರಿದಂತೆ ಇನ್ನು ಹಲವು ಹಕ್ಕುಗಳು ಲಭಿಸಿದ್ದು ಇವುಗಳ ಉಲ್ಲಂಘನೆಯಾಗ ದಂತೆ ನೋಡಿಕೊಳ್ಳಬೇಕಿದೆ ಎಂದರು.

ಬಾಲಕಾರ್ಮಿಕ, ಜೀತಪದ್ಧತಿಯೂ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇವುಗಳನ್ನು ತಡೆಯಲು ಸಂಬಂಧಪಟ್ಟ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಹಕ್ಕುಗಳ ರಕ್ಷಣೆ, ಅದರ ಪ್ರಾಮುಖ್ಯತೆ ಕುರಿತು ಸರ್ಕಾರೇತರ ಸ್ವಯಂಸೇವಾ ಸಂಸ್ಥೆಗಳು ಸಹ ಜಾಗೃತಿ ಮೂಡಿಸಬೇಕಿದೆ. ಒಟ್ಟಾರೆ ಮಾನವ ಹಕ್ಕುಗಳ ಉಲ್ಲಂಘನೆಗೆ ಕಡಿವಾಣ ಹಾಕು ವುದು ಎಲ್ಲರ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕಾವೇರಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡಿದಾಗ ಹಕ್ಕುಗಳ ಸಂರಕ್ಷಣೆ ಸಾಧ್ಯವಾಗಲಿದೆ. ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯ ಆಗಬೇಕಿದೆ. ಮಾನವ ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆÀ ಎಂದು ಅಭಿಪ್ರಾಯಪಟ್ಟರು.
ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಮಾತ ನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಮಾನವ ಹಕ್ಕುಗಳಿಗೆ ಮಾನ್ಯತೆ ಇರಲಿಲ್ಲ. ತಾರ ತಮ್ಯದ ವಾತಾವರಣದಿಂದ ಮಾನವ ಹಕ್ಕುಗಳ ರಕ್ಷಣೆ ಇರಲಿಲ್ಲ. ಪ್ರಸ್ತುತ ಮಾನವ ಹಕ್ಕುಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು.

ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶಕುಂತಲ ಅವರು ಪ್ರತಿ ವ್ಯಕ್ತಿಗೂ ಸಾಮಾಜಿಕ, ರಾಜಕೀಯ, ಆರ್ಥಿಕವಾಗಿ ಮುಂದುವರಿಯಲು ಅವಕಾಶ ಗಳನ್ನು ನೀಡಬೇಕಿದೆ. ಈ ನಿಟ್ಟಿನಲ್ಲಿ ಹಕ್ಕುಗಳನ್ನು ನೀಡಲಾಗಿದೆ. ವಿಶ್ವ ಸಂಸ್ಥೆಯು 1948ರಲ್ಲಿ ಮಾನವ ಹಕ್ಕುಗಳ ಘೋಷಣೆ ಮಾಡಿದೆ. ಭಾರತದಲ್ಲಿ 1993ರಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಚಿಸಲಾಯಿತು. ಕರ್ನಾಟಕ ರಾಜ್ಯದಲ್ಲಿ 2007ರಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಅಸ್ತಿತ್ವಕ್ಕೆ ಬಂದಿದೆ ಎಂದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾನವ ಹಕ್ಕುಗಳ ಕುರಿತ ಪ್ರತಿಜ್ಞಾವಿಧಿ ಯನ್ನು ಬೋಧಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಹೆಚ್ಚು ವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ಕಾರ್ಯಕ್ರಮದಲ್ಲಿ ಉಪಸ್ಥಿತ ರಿದ್ದರು. ಜಂಟಿ ಕೃಷಿ ನಿರ್ದೇಶಕರಾದ ಡಾ. ಎಂ. ತಿರುಮಲೇಶ್ ಕಾರ್ಯಕ್ರಮ ನಿರೂಪಿಸಿದರು.

Translate »