ಬಜೆಟ್‍ನಲ್ಲಿ ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಲೋಕಾಯುಕ್ತ ನಿರ್ದೇಶನ
ಮೈಸೂರು

ಬಜೆಟ್‍ನಲ್ಲಿ ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಲೋಕಾಯುಕ್ತ ನಿರ್ದೇಶನ

March 1, 2021

ಬೆಂಗಳೂರು, ಫೆ. 28-ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ನಲ್ಲಿ ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿಯವರು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.

ಸಾಮಾಜಿಕ ಹೋರಾಟಗಾರ ಸಿದ್ದಲಿಂಗೇಗೌಡ ಎಂಬುವವರು ನೀಡಿದ ದೂರನ್ನು ಪರಿಶೀಲನೆ ನಡೆಸಿದ ವಿಶ್ವನಾಥ್ ಶೆಟ್ಟಿಯವರು, ಈ ಬಾರಿಯ ರಾಜ್ಯ ಬಜೆಟ್‍ನಲ್ಲಿ ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಇದೇ ವೇಳೆ ತುರ್ತು ಸಂದರ್ಭದಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಎಲ್ಲಾ ರೀತಿಯ ಸೌಲಭ್ಯಗಳಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳವಂತೆ ಹಾಗೂ ಕೇಂದ್ರೀಯ ಸಂವಹನ ವ್ಯವಸ್ಥೆಗಳನ್ನು ಒದಗಿಸಿ, ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಶೀಘ್ರಗತಿಯಲ್ಲಿ ಹಾಸಿಗೆ ದೊರೆಯುವಂತೆ ಕ್ರಮಗಳನ್ನು ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ವೈದ್ಯಕೀಯ ಉಪಕರಣಗಳು, ಆಂಬುಲೆನ್ಸ್ ಸೇವೆಗಳಿಗೆ ಕೈಗೊಂಡಿರುವ ಕ್ರಮ ಗಳ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

Translate »