ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳ ಸಂತೆ ಭರ್ಜರಿಯಾಗಿ ನಡೆಯಿತು. ಇಲ್ಲಿನ ಗ್ರಾಪಂ ಅಧ್ಯಕ್ಷ ಕೆ.ಎಸ್.ಭಾರತಿಯವರು ಸಂತೆಗೆ ಚಾಲನೆ ನೀಡಿದರು.
ಈ ಸಂದರ್ಭ ಎಸ್‍ಡಿಎಂಸಿ ಅಧ್ಯಕ್ಷ ಬಿ.ಎಸ್.ದಿನೇಶ್ ಮತ್ತು ಸದಸ್ಯರು ಹಾಜರಿದ್ದರು. ಗುಡ್ಡೆಹೊಸೂರುನ ಗ್ರಾಮಸ್ಥರಿಗೆ ಸ್ಥಳೀಯವಾಗಿ ಮಂಗ ಳವಾರ ಕುಶಾಲನಗರ ಸಂತೆಯಾದ್ದರಿಂದ ಹಲವು ಸಾರ್ವಜನಿಕರು ಶಾಲಾ ಆವರಣದಲ್ಲಿ ತರಕಾರಿ ಖರೀದಿಸುವ ದೃಶ್ಯ ಕಂಡು ಬಂತು.
ಈ ಸಂದರ್ಭ ಶಾಲಾ ಮುಖ್ಯಶಿಕ್ಷಕ ಸಣ್ಣಸ್ವಾಮಿ ಮತ್ತು ಶಿಕ್ಷಕ ವೃಂದ ಹಾಜರಿದ್ದರು. ಈ ಸಂದರ್ಭ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಭಾರತಿ ಮಾತನಾಡಿ, ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮ ಮಾಡುವುದರಿಂದ ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚುವುದಾಗಿ ತಿಳಿಸಿದರು. ಮಕ್ಕಳು ತಮ್ಮ ತಮ್ಮ ಮನೆಗಳಲ್ಲಿ ಬೆಳೆಸಿದ್ದ ತರಕಾರಿ ಗಳನ್ನು ವ್ಯಾಪಾರಕ್ಕಾಗಿ ತಂದಿದ್ದರು.