ನ.25ರಂದು ಮುಡುಕುತೊರೆಯ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಪುನರ್ ನಿರ್ಮಾಣಕ್ಕೆ ಸಿಎಂ ಚಾಲನೆ
ಮೈಸೂರು

ನ.25ರಂದು ಮುಡುಕುತೊರೆಯ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಪುನರ್ ನಿರ್ಮಾಣಕ್ಕೆ ಸಿಎಂ ಚಾಲನೆ

November 23, 2020

ಮೈಸೂರು,ನ.22(ಎಂಟಿವೈ)- ಇತಿಹಾಸ ಪ್ರಸಿದ್ಧ ಯಾತ್ರಾಸ್ಥಳ ತಲಕಾಡಿನ ಪಂಚಲಿಂಗಗಳಲ್ಲಿ ಒಂದಾ ಗಿರುವ ಹಾಗೂ ಶಿಥಿಲ ಸ್ಥಿತಿಗೆ ತಲುಪಿದ್ದ ಮುಡುಕು ತೊರೆ ಶ್ರೀ ಭ್ರsಮರಾಂಬ ಸಮೇತ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವನ್ನು ಸರ್ಕಾರ 30 ಕೋಟಿ ರೂ. ವೆಚ್ಚದಲ್ಲಿ ಚಾಲುಕ್ಯ ಶೈಲಿಯಲ್ಲಿ ಪುನರ್ ನಿರ್ಮಾಣ ಮಾಡಲು ಮುಂದಾಗಿದ್ದು, ನ.25ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ದೇವಾಲಯ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ. ನಂದೀಶ್ ಹಂಚೆ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನು ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಲಕಾಡಿನ ದೇವಾಲಯಗಳಲ್ಲಿ ಮುಡುಕುತೊರೆಯ ಶ್ರೀ ಭ್ರಮರಾಂಬ ಸಮೇತ ಮಲ್ಲಿಕಾರ್ಜುನ ದೇವಾ ಲಯದ ಕೆಲವು ಭಾಗ ಶಿಥಿಲಗೊಂಡಿತ್ತು. ದೇವಾ ಲಯ ಪುನರ್ ನಿರ್ಮಾಣ ಮಾಡಲಾಗುತ್ತಿದೆ. ಇದ ಕ್ಕಾಗಿ ಶ್ರೀ ಭ್ರಮರಾಂಬಸಮೇತ ಮಲ್ಲಿಕಾರ್ಜುನಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ರಚಿಸಲಾಗಿದೆ. ಮೂಲ ದೇವರ ವಿಗ್ರಹಗಳನ್ನು ಗರ್ಭಗುಡಿಯಲ್ಲೇ ಉಳಿಸಿ ಕೊಂಡು ಸಂಪೂರ್ಣವಾಗಿ ದೇವಾಲಯವನ್ನು ತೆರೆವು ಗೊಳಿಸಿ ಹೊಸದಾಗಿ ನಿರ್ಮಾಣ ಮಾಡಲಾಗುತ್ತಿದೆ. ಚೋಳ-ಚಾಲುಕ್ಯರ ಮಿಶ್ರಿತ ಶೈಲಿಯಲ್ಲಿ ಪುನರ್ ನಿರ್ಮಾಣವಾಗುತ್ತಿದೆ ಎಂದರು.

ಮೊದಲ ಹಂತದಲ್ಲಿ ಭ್ರಮಾರಂಬ ದೇವಾಲಯ ವನ್ನು ಪೂರ್ಣ ಪ್ರಮಾಣದಲ್ಲಿ ಕೃಷ್ಣ ಶಿಲೆಯಲ್ಲಿ, ಮಲ್ಲಿ ಕಾರ್ಜುನಸ್ವಾಮಿ ದೇವಾಲಯವನ್ನು ಬಿಳಿಕಲ್ಲು, 2ನೇ ಹಂತದಲ್ಲಿ ಚಂದ್ರಶಾಲೆ ನಿರ್ಮಾಣ ಹಾಗೂ 3ನೇ ಹಂತ ದಲ್ಲಿ ರಾಜಗೋಪುರ ನಿರ್ಮಾಣ ಆಗಲಿದೆ. ಒಟ್ಟು 30 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಸ ಲಾಗುತ್ತದೆ. 10 ಕೋಟಿ ರೂ. ವೆಚ್ಚದಲ್ಲಿ ಬೆಟ್ಟಕ್ಕೆ ಸುರಕ್ಷಿತ ಗೋಡೆ ಹಾಗೂ ರಥ ಬೀದಿ ನಿರ್ಮಾಣ ಮಾಡಲಾಗು ವುದು ಎಂದು ತಿಳಿಸಿದರು.

ಈ ದೇವಸ್ಥಾನಗಳ ಪುನರ್ ನಿರ್ಮಾಣ 16 ಕೋಟಿ ರೂ. ವೆಚ್ಚದಲ್ಲಿ ಇದಕ್ಕೆ ಸರ್ಕಾರ 5 ಕೋಟಿ ರೂ. ಬಿಡುಗಡೆಗೊಳಿ ಸಿದೆ. ಉಳಿದ 11 ಕೋಟಿ ರೂ. ಅನ್ನು ಶ್ರೀ ಭ್ರಮ ರಾಂಬ ಸಮೇತ ಮಲ್ಲಿಕಾರ್ಜುನ ಸ್ವಾಮಿ ದೇವಾ ಲಯ ಅಭಿವೃದ್ಧಿ ಸಮಿತಿಯು ಭಕ್ತರಿಂದ ಸಂಗ್ರಹಿಸಲು ಸರ್ಕಾರ ಅನುಮತಿ ನೀಡಿದೆ. ಈ ಸಮಿತಿ ಪಾರ ದರ್ಶಕತೆಯಿಂದ ಕೆಲಸ ಮಾಡಲು ಜಿಲ್ಲಾಧಿಕಾರಿಗೆ ನೇತೃತ್ವ ವಹಿಸಲಾಗಿದೆ ಎಂದು ತಿಳಿಸಿದರು.

ನ.25ರಂದು ಶಂಕುಸ್ಥಾಪನೆ: ದೇವಾಲಯದ ಅಭಿ ವೃದ್ಧಿ ಸಮಿತಿ ಅಧ್ಯಕ್ಷ ಪೆÇ್ರ.ಎಸ್.ಪಿ.ಮಂಜುನಾಥ್ ಮಾತನಾಡಿ, ಜಿಲ್ಲಾಡಳಿತ, ಧಾರ್ಮಿಕ ದತ್ತಿ ಮತ್ತು ಲೋಕೋಪಯೋಗಿ ಇಲಾಖೆ ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿಯಿಂದ ಆಯೋಜಿಸಿರುವ ದೇವಾ ಲಯ ಪುನರ್ ನಿರ್ಮಾಣ ಕಾರ್ಯಕ್ರಮವನ್ನು ನ.25 ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಡಿಗಲ್ಲು ಹಾಕುವ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉಪಮುಖ್ಯ ಮಂತ್ರಿ ಗೋವಿಂದ್ ಎಂ.ಕಾರಜೋಳ, ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದÀ ವಿ.ಶ್ರೀನಿ ವಾಸ ಪ್ರಸಾದ್, ಜಿಪಂ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ ಭಾಗವಹಿಸಲಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಎಂ.ಅಶ್ವಿನ್‍ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ.24 ಮತ್ತು 25ರಂದು ದೇವಸ್ಥಾನಕ್ಕೆ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ವೈದ್ಯನಾಥೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಟೇಶ್ ಇದ್ದರು.

Translate »