ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಮಮತಾ ಗಿರೀಶ್
ಹಾಸನ

ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಮಮತಾ ಗಿರೀಶ್

December 28, 2018

ಬೇಲೂರು: ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಯಲ್ಲಿ ಕಂದಾವರ ಗ್ರಾಮದ ಮಮತಾ ಗಿರೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲೂಕಿನ ಅರೇಹಳ್ಳಿ ಹೋಬಳಿ ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಯಶೋಧ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕಂದಾವರ ಗ್ರಾಮದ ಮಮತಾ ಗಿರೀಶ್ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ತಾಪಂ ಇಒ ರವಿಕುಮಾರ್ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಮಾತನಾಡಿದ ಮಮತಾ ಗಿರೀಶ್, ತೊಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲೂ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಪ್ರಮುಖವಾಗಿ ಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಆಶ್ರಯ ಮನೆ, ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವುದಕ್ಕೆ ಎಲ್ಲಾ ಸದಸ್ಯರ ಸಹಕಾರದೊಂದಿಗೆ ತೊಳಲು ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಪಂ ಸದಸ್ಯ ಶಶಿಕುಮಾರ್, ಮಾಜಿ ಸದಸ್ಯ ಕುಮಾರ್, ತೊಳಲು ಗ್ರಾಪಂ ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ರವಿ, ಗೀತಾ, ರವಿ.ಕೆ, ಇಬ್ರಾಹಿಂ, ಸುರೇಶ್, ರೋಜಮಣಿ, ಹೊನ್ನಪ್ಪ, ನಿಂಗಮ್ಮ, ಯಶೋಧ, ಸುಧಾ, ಮುಖಂಡರಾದ ಧರ್ಮೇಗೌಡ, ನಾಗೇಶ, ಗಿರೀಶ್, ನಾಗಣ್ಣ, ವೆಂಕಟೇಶ್, ಪಿಡಿಒ ಆರತಿ, ಕಾರ್ಯದರ್ಶಿ ಬಸವರಾಜು ಹಾಗೂ ಇನ್ನಿತರರಿದ್ದರು.

Translate »