ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಕೊಡಗು

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

August 27, 2018

ಸೋಮವಾರಪೇಟೆ:  ಜೀವನ ದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಿನ್ನೆ ಸಂಜೆ ಸಮೀಪದ ಯಡವಾರೆ ಗ್ರಾಮದಲ್ಲಿ ಸಂಭವಿಸಿದೆ.

ಯಡವಾರೆ ಗ್ರಾಮ ಸಜ್ಜಳ್ಳಿ ನಿವಾಸಿ ನಾಗವೇಣಿ ಎಂಬವರ ಪತಿ ಕಲ್ಲಗದ್ದೆ ಕೆ. ಬಾಲಕೃಷ್ಣ (70) ಎಂಬವರೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕುತ್ತಿಗೆ ಭಾಗಕ್ಕೆ ಕೋವಿ ಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ನಡೆಯಿತು. ಮೃತರು ಪತ್ನಿ ಸೇರಿದಂತೆ ಈರ್ವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Translate »