ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತ
ಹಾಸನ

ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತ

July 26, 2018

ಬೇಲೂರು: ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಅಗ್ಗಡಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸೋಮೇಗೌಡ(62) ಮೃತರು. ಇಂದು ಸಂಜೆ ಮೃತರು ತಮ್ಮ ತೋಟ ದಲ್ಲಿ ಮರಗಳನ್ನು ತೆರವುಗೊಳಿಸುತ್ತಿದ್ದ ಸಮಯದಲ್ಲಿ ಕಬ್ಬಿಣದ ಏಣಿಯು ವಿದ್ಯುತ್ ತಂತಿಗಳಿಗೆ ತಾಗಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾ ಗಮಿಸಿದ ಪರಿಶೀಲಿಸಿದ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Translate »