ಹೊಳೆನರಸೀಪುರ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಹಾಸನ-ಮೈಸೂರು ಹೆದ್ದಾರಿಯ ಆಲದಹಳ್ಳಿ ರಸ್ತೆಯ ಬಳಿ ನಡೆದಿದೆ.
ಮೃತನು ಚನ್ನೇಶ(40) ಮೃತ ವ್ಯಕ್ತಿ ಬಿಸಲೆಹಳ್ಳಿಯ ಕಡೂರು ನಿವಾಸಿ ಎಂದು ಗುರುತಿಸಲಾಗಿದ್ದು, ಬೆಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿದ್ದ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ರವಿ ಶಂಕರ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತನ ಜೇಬಿನಲ್ಲಿ ಆಧಾರ್ ಕಾರ್ಡ್ ಇದ್ದ ಕಾರಣ ಆತನ ಸಂಬಂಧಿಕರಿಗೆ ವಿಷಯ ಮುಟ್ಟಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಸಾಗಿಸಲಾಗಿದೆ.