ಮಂಗಳೂರು ಗೋಲಿಬಾರ್: ಪೊಲೀಸರ ವಿರುದ್ಧ ಕ್ರಮಕ್ಕೆ ಎಸ್‍ಡಿಪಿಐ ಆಗ್ರಹ
ಮೈಸೂರು

ಮಂಗಳೂರು ಗೋಲಿಬಾರ್: ಪೊಲೀಸರ ವಿರುದ್ಧ ಕ್ರಮಕ್ಕೆ ಎಸ್‍ಡಿಪಿಐ ಆಗ್ರಹ

December 21, 2019

ಮೈಸೂರು, ಡಿ.20(ಆರ್‍ಕೆಬಿ)- ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದವರ ಮೇಲೆ ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರ ಸಾವಿಗೆ ಕಾರಣರಾದ ಫ್ಯಾಸಿಸ್ಟ್ ಮನೋಸ್ಥಿತಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್‍ಡಿಪಿಐ ಮುಖಂಡ ಅಮ್ಜದ್ ಖಾನ್ ಆಗ್ರಹಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರ ಗೋಲಿಬಾರ್‍ಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ಕೋಟಿ ರೂ. ಪರಿಹಾರ ನೀಡಬೇಕು. ಗಾಯಾಳುಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು. ಇಡೀ ಪ್ರಕ ರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಕಲ್ಲಡ್ಕ ಗ್ರಾಮದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿದ ಆರ್‍ಎಸ್‍ಎಸ್ ಸಂಚಾಲಕ ಕಲ್ಲóಡ್ಕ ಪ್ರಭಾಕರ ಭಟ್ ಮತ್ತು ಸಂಬಂಧಪಟ್ಟ ಶಾಲೆಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಸಂಸದ ಪ್ರತಾಪ್ ಸಿಂಹ ಎಸ್‍ಡಿಪಿಐ ವಿರುದ್ಧ ಆರೋಪ ಮಾಡುವುದನ್ನು ಬಿಡಬೇಕು. ಮೊದಲು ತಾವು ಏನೆಂಬುದನ್ನು ತಿಳಿದುಕೊಂಡು ನಂತರ ಮತ್ತೊಬ್ಬರ ಬಗ್ಗೆ ಮಾತನಾಡಲಿ ಎಂದು ಅಮ್ಜದ್ ಸಲಹೆ ನೀಡಿದರು. ಸುದ್ದಿಗೋಷ್ಠಿಂiÀiಲ್ಲಿ ಎಸ್‍ಡಿಪಿಐನ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ ಉಪಸ್ಥಿತರಿದ್ದರು.

Translate »