ಅ.25ರಿಂದ ಮಂಗಳೂರು-ಮೈಸೂರು ಏರ್ ಇಂಡಿಯಾ ವಿಮಾನ ಹಾರಾಟ
ಮೈಸೂರು

ಅ.25ರಿಂದ ಮಂಗಳೂರು-ಮೈಸೂರು ಏರ್ ಇಂಡಿಯಾ ವಿಮಾನ ಹಾರಾಟ

October 16, 2020

ಮೈಸೂರು,ಅ.15-ಇದೇ ಅ.25ರಿಂದ ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂ ಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ಟ್ರಯಲ್ ರನ್ ನಂತರ ಕಾರ್ಯಸಾಧ್ಯತಾ ವರದಿ ಆಧರಿಸಿ ಅಂತಿಮ ನಿರ್ಧಾರ ತೆಗೆದು ಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಈ 2 ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಸಂಸದ ಪ್ರತಾಪ್ ಸಿಂಹ ಮತ್ತು ಕೆಲವು ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿದ್ದರು. ಏರ್ ಇಂಡಿಯಾ ಬೆಂಗ ಳೂರಿನಿಂದ ಮಂಗಳೂರಿಗೆ ಬೆಳಗ್ಗೆ 6.50ಕ್ಕೆ ಬರುವ ವಿಮಾನವನ್ನೇ ಮೈಸೂರಿನ ಕಡೆ ತಿರುಗಿಸುವ ಸೂಚನೆ ಇದೆ. ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ.

Translate »