ಮುರುಘಾ ಶ್ರೀಗಳಿಗೆ ಪುರುಷತ್ವ ಪರೀಕ್ಷೆ
News

ಮುರುಘಾ ಶ್ರೀಗಳಿಗೆ ಪುರುಷತ್ವ ಪರೀಕ್ಷೆ

September 4, 2022

ಚಿತ್ರದುರ್ಗ, ಸೆ. 3- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವ ಮೂರ್ತಿ ಸ್ವಾಮೀಜಿಗಳಿಗೆ ಶನಿವಾರ ಬೆಳಗ್ಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.

ಪೆÇಲೀಸರು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶ್ರೀಗಳನ್ನು ಇಂದು ಬೆಳಗ್ಗೆ ಕರೆದೊಯ್ದಿದ್ದರು. ಅಲ್ಲಿ ವೈದ್ಯ ರಾದ ಡಾ. ವೇಣು ನೇತೃತ್ವದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾ ಗಿದ್ದು, ಶರಣರ ರಕ್ತ, ಮೂತ್ರ, ಕೂದಲು ಸೇರಿದಂತೆ ಹಲವು ಸ್ಯಾಂಪಲ್‍ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಪಡೆದಿದ್ದು ಅದರ ಪರೀಕ್ಷೆ ವರದಿ ಬರಬೇಕಿದೆ. ನಂತರ ಚಿತ್ರದುರ್ಗ ಡಿವೈಎಸ್‍ಪಿ ಅನಿಲ್‍ಕುಮಾರ್ ನೇತೃತ್ವದಲ್ಲಿ ಮುರುಘಾ ಶ್ರೀಗಳನ್ನು ವಿಚಾರಣೆ ನಡೆಸಲಾಗಿದೆ. ಈ ವೇಳೆ ಪೆÇಲೀಸರು ಕೇಳಿದ ಕೆಲ ಪ್ರಶ್ನೆಗಳಿಗೆ ಶ್ರೀಗಳು ಉತ್ತರ ನೀಡಿದ್ದಾರೆ. ಆದರೆ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ಹಿಂದೇಟು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ವಾಮೀಜಿ ಎಲ್ಲಾ ಪ್ರಶ್ನೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಪೆÇೀಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಸೋಮವಾರದವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ ಎಂದು ಶ್ರೀಗಳ ಪರ ವಕೀಲರಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನೇರವಾಗಿ ಹೇಳಿದೆ.

ಲೈಂಗಿಕ ಕಿರುಕುಳ ಆರೋಪದ ಮೇಲೆ ಮುರುಘಾ ಮಠದ ಶ್ರೀಗಳು ಜೈಲು ಪಾಲಾಗಿದ್ದು, ಮುರುಘಾ ಮಠದ ಆಪ್ತ ವಕೀಲ ಉಮೇಶ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಶ್ರೀಗಳ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮುಂದಾದರು. ಆದರೆ ಪೆÇಲೀಸ್ ಕಸ್ಟಡಿ ಮುಗಿಯುವವರೆಗೆ ಜಾಮೀನು ಅರ್ಜಿ ಸಲ್ಲಿಸಬೇಡಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶರು ಸೂಚಿಸಿದ್ದಾರೆ.

ಹಾಸ್ಟೆಲ್ ವಿದ್ಯಾರ್ಥಿನಿಯರ ಭವಿಷ್ಯದ ಚಿಂತೆ: ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಬೆನ್ನಲ್ಲೇ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಭವಿಷ್ಯದ ಬಗ್ಗೆ ಚಿಂತೆ ಎದುರಾಗಿದೆ. ಮುರುಘಾ ಮಠದಲ್ಲಿರುವ ವಿದ್ಯಾರ್ಥಿನಿಯರನ್ನು ಬೇರೆಡೆಗೆ ಶಿಫ್ಟ್ ಮಾಡುವ ಕುರಿತು ಮಕ್ಕಳ ಹಕ್ಕು ಆಯೋಗ ಚಿಂತನೆ ನಡೆಸಿದೆ.

Translate »