ಸುಳವಾಡಿ ಕಿಚ್‍ಗುತ್ ಮಾರಮ್ಮ ವಿಷ ಪ್ರಸಾದ ದುರಂತ  ಡಿಆರ್‍ಎಂ ಆಸ್ಪತ್ರೆಯಿಂದ   ನಾಲ್ವರು ರೋಗಿಗಳು ಡಿಸ್ಚಾರ್ಜ್
ಚಾಮರಾಜನಗರ

ಸುಳವಾಡಿ ಕಿಚ್‍ಗುತ್ ಮಾರಮ್ಮ ವಿಷ ಪ್ರಸಾದ ದುರಂತ ಡಿಆರ್‍ಎಂ ಆಸ್ಪತ್ರೆಯಿಂದ ನಾಲ್ವರು ರೋಗಿಗಳು ಡಿಸ್ಚಾರ್ಜ್

January 3, 2019

ಮೈಸೂರು: ಹನೂರು ತಾಲೂ ಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾದ ಹಲವು ರೋಗಿ ಗಳು ನಗರದ ವಿವಿಧ ಪ್ರತಿಷ್ಠಿತ ಆಸ್ಪತ್ರೆಗ ಳಿಗೆ ದಾಖಲಾಗಿದ್ದರು. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ರೋಗಿಗಳ ಆರೋಗ್ಯದ ಕುರಿತು ತೀವ್ರ ನಿಗಾ ವಹಿಸಿತ್ತು.

ನಗರದ ಹೃದಯಭಾಗದಲ್ಲಿರುವ ಡಿಆರ್‍ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಲ್ವರು ರೋಗಿಗಳು ದಾಖಲಾಗಿದ್ದು, ಅವರೆಲ್ಲರೂ ಸಂಪೂರ್ಣವಾಗಿ ಗುಣಮುಖರಾಗಿದ್ದು, ಜ.1 ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ದ್ದಾರೆ. ಡಿ.15ರಂದು ಜಯಲಕ್ಷ್ಮಿ(19), ಕೆಂಪರಾಜಮ್ಮ(38), ಮಹಾದೇವಿ(33) ಹಾಗೂ ರಮೇಶ್(25) ಎಂಬ ಒಂದೇ ಕುಟುಂಬದ ನಾಲ್ವರು ಸದಸ್ಯರು ವಿಷಾ ಹಾರ ಸೇವನೆಯಿಂದಾಗಿ ಅಸ್ವಸ್ಥಗೊಂಡು ಡಿಆರ್‍ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು.

ಅಧಿಕ ಪ್ರಮಾಣದ ವಿಷದ ಸೇವನೆ ಹಾಗೂ ಆಸ್ಪತ್ರೆಗೆ ಕರೆತರುವಾಗ ಆದ ವಿಳಂಬದ ಪರಿಣಾಮವಾಗಿ ಅವರು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ವಿಷದ ಪರಿಣಾಮವಾಗಿ ಅವರು ಶ್ವಾಸಕೋಶಗಳ ವೈಫಲ್ಯಕ್ಕೊಳಗಾಗಿ ಪ್ರಜ್ಞಾಹೀನ ಸ್ಥಿತಿಯ ಲ್ಲಿದ್ದರು. ತೀವ್ರ ನಿಗಾ ಘಟಕದಲ್ಲಿ ವೆಂಟಿ ಲೇಟರ್ ಅಳವಡಿಸುವ ಮೂಲಕ ಅವ ರಿಗೆ ಚಿಕಿತ್ಸೆ ಆರಂಭಿಸಲಾಯಿತು.

ಸತತ 12 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ಬಳಿಕ ರೋಗಿ ಗಳನ್ನು ವೆಂಟಿಲೇಟರ್ ನಿಂದ ಹೊರ ತೆಗೆ ಯಲಾಯಿತು. ನಂತರ ನಾಲ್ವರು ರೋಗಿ ಗಳೂ ಸಂಪೂರ್ಣವಾಗಿ ಗುಣಮುಖರಾ ಗಿದ್ದು, ಹೊಸ ವರ್ಷದ ಮೊದಲ ದಿನದಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ತೀವ್ರ ಅಸ್ವಸ್ಥರಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ನಾಲ್ವರು ರೋಗಿಗ ಳನ್ನು ಗುಣಪಡಿಸಿದ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದ ಬಗ್ಗೆ ಅತ್ಯಂತ ಹೆಮ್ಮೆಯನ್ನು ವ್ಯಕ್ತಪಡಿಸಿ, ಆಸ್ಪ ತ್ರೆಯ ನಿರ್ದೇಶಕರು, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಡಾ.ಬಿ.ಹೆಚ್.ಮಂಜು ನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಕೊಳ್ಳೇಗಾಲ ನ್ಯಾಯಾಲಯಕ್ಕೆ ಆರೋಪಿಗಳ ಹಾಜರು
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂ ಕಿನ ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ನಡೆದ ವಿಷ ಪ್ರಸಾದ ದುರಂತದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ನಾಳೆಗೆ (ಜ.3) ಕೊನೆಗೊಳ್ಳಲಿದೆ.

ವಿಷ ಪ್ರಸಾದ ಸೇವಿಸಿ 17 ಭಕ್ತರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಮತ್ತು ದೊಡ್ಡಯ್ಯನನ್ನು ಬಂಧಿಸಿದ್ದರು. ಈ ಎಲ್ಲಾ ಆರೋಪಿಗಳನ್ನು ಡಿ.21ರ ಮಧ್ಯರಾತ್ರಿ ಕೊಳ್ಳೇಗಾಲದ ಪ್ರಧಾನ ಸಿವಿಲ್ ನ್ಯಾಯಾ ಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ನ್ಯಾಯಾಧೀಶರು ನಾಲ್ವರನ್ನು ಜನವರಿ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಗುರುವಾರಕ್ಕೆ ನ್ಯಾಯಾಂಗ ಬಂಧನ ಕೊನೆಗೊಳ್ಳಲಿರು ವುದರಿಂದ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಇರುವ ಎಲ್ಲಾ ನಾಲ್ವರು ಆರೋಪಿಗಳನ್ನು ಬೆಳಿಗ್ಗೆ 11 ಗಂಟೆಗೆ ಕೊಳ್ಳೇ ಗಾಲದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದ್ದಾರೆ.

Translate »