ನೆಲ್ಯಹುದಿಕೇರಿ ಗ್ರಾಮ ಸಭೆಯಲ್ಲಿ ಗಾಂಜಾ ಸದ್ದು!
ಕೊಡಗು

ನೆಲ್ಯಹುದಿಕೇರಿ ಗ್ರಾಮ ಸಭೆಯಲ್ಲಿ ಗಾಂಜಾ ಸದ್ದು!

November 5, 2018

ಗ್ರಾಮಸ್ಥರು ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರು, ಅಧಿಕಾರಿಗಳಿಗೆ ತರಾಟೆ
ಸಿದ್ದಾಪುರ: ಗ್ರಾಮದಲ್ಲಿ ನಿರಂತರವಾಗಿ ಗಾಂಜಾ ಮಾರಾಟ ಹಾಗೂ ವ್ಯಸನಿಗಳು ಅಧಿಕವಾಗಿದ್ದು, ಪೊಲೀಸರು ಸೂಕ್ತ ಕ್ರಮಕೈಗೊಳ್ಳದೇ ಅಸಹಾಯಕತೆ ತೋರುತ್ತಿದ್ದಾರೆ ಎಂದು ಪೊಲೀಸರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನೆಲ್ಲಿಹುದಿಕೇರಿ ಗ್ರಾಮಸಭೆಯಲ್ಲಿ ನಡೆಯಿತು.

ಗ್ರಾಮದ ನಿವಾಸಿ ಅಜೀಜ್ ಮಾತನಾಡಿ, ಕಳೆದ ಹಲವು ವರ್ಷಗಳಿಂದಲೂ ನಿರಂ ತರವಾಗಿ ವಿದ್ಯಾರ್ಥಿಗಳೇ ಹೆಚ್ಚು ಗಾಂಜಾ ವ್ಯಸನಿಗಳಾಗುತ್ತಿದ್ದಾರೆ. ಶಾಲಾ, ಅಂಗನವಾಡಿ ಕಟ್ಟಡ ಹಾಗೂ ಗಲ್ಲಿಗಳಲ್ಲಿ ಗಾಂಜಾ ಸೇವನೆ, ಮಾರಾಟ ನಿರಂತರವಾಗಿ ನಡೆಯುತ್ತಿದೆ. ಕಳೆದ ಗ್ರಾಮಸಭೆಯಲ್ಲೂ ಗಾಂಜಾ ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿ ನೀಡಲಾಗಿ ತ್ತಾದರೂ ಇದುವರೆಗೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇತ್ತೀಚೆಗೆ ಗ್ರಾಮಸ್ಥರೇ ಗಾಂಜಾ ಸೇವನೆ ಮತ್ತು ಮಾರಾಟಗಾರರ ಮಾಹಿತಿ ನೀಡಿದಾಗ ಇಬ್ಬರನ್ನು ಪೊಲೀಸರು ಬಂಧಿಸಿ ಅವರಿಂದ ಹಣ ವಸೂಲಿ ಮಾಡಿ, ಬಿಟ್ಟು ಕಳಿಸಿದ್ದಾರೆ ಎಂದು ಆರೋಪಿಸಿದರು. ಗ್ರಾಪಂ ಸದಸ್ಯ ಎ.ಕೆ.ಹಕೀಂ ಮಾತನಾಡಿ, ಗ್ರಾಮದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು, ಪೊಲೀಸ್ ಇಲಾಖೆ ಗಾಂಜಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಕಾರ್ಮಿಕ ಮುಖಂಡ ಭರತ್ ಮಾತನಾಡಿ, ಗಾಂಜಾ ವ್ಯಸನಿಗಳನ್ನು ಹಿಡಿದು ಬಿಡುವುದಕ್ಕಿಂತ ಮಾರಾಟಗಾರರನ್ನು ಪತ್ತೆಹಚ್ಚುವ ಕೆಲಸ ಮಾಡಬೇಕಾಗಿದೆ. ಗಾಂಜಾ ಮಾರಾಟದ ದೊಡ್ಡ ಜಾಲವೇ ಇದ್ದು, ಇದರಿಂದ ಬಡ ವರ್ಗದ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಿದ್ದಾಪುರ ಠಾಣೆಯ ಎಎಸ್‍ಐ ರಾಜು ಮಾತನಾಡಿ, ಇಂತಹ ಪ್ರಕರಣಗಳ ಬಗ್ಗೆ ಗ್ರಾಮಸ್ಥರು ಪೊಲೀಸರೊಂದಿಗೆ ಸಹಕರಿಸಬೇಕು. ಇತ್ತೀಚೆಗೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ದುಶ್ಚಟಗಳಲ್ಲಿ ತೊಡಗಿಕೊಂಡಿದ್ದ ಕೆಲವು ಯುವಕರನ್ನು ವಿಚಾರಣೆ ಒಳಪಡಿಸಲಾಗಿದೆ. ಪೊಲೀಸ್ ಬೀಟ್ ಮುಂದುವರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಂದಾಯ ಅರಣ್ಯ ಇಲಾಖೆ ಅಧಿಕಾರಿಗಳ ತರಾಟೆಗೆ: ಕಾಡಾನೆ ಹಾವಳಿ ಮಿತಿ ಮೀರಿದ್ದು, ಕ್ರಮಕೈಗೊಳ್ಳಲು ಮುಂದಾಗುತ್ತಿಲ್ಲ ಅಪಾಯದ ಅಂಚಿನಲ್ಲಿರುವ ಮರಗಳನ್ನು ತೆರವುಗೊಳಿಸಲು ಅಸಹಾಯಕತೆ ತೋರುತ್ತಿರುವ ಅರಣ್ಯ ಇಲಾಖೆ ವಿರುದ್ಧ ಭರತ್ ಆಕ್ರೋಶ ವ್ಯಕ್ತಪಡಿಸಿದರು. ಪ್ರವಾಹ ಸಂದರ್ಭದಲ್ಲಿ ನದಿ, ದಡ ಮÉಗಳು ಬಿರುಕು ಬಿಟ್ಟು ಹಾನಿಗೀಡಾಗಿದೆ.

Translate »