ಅತಿಥಿ, ಗುತ್ತಿಗೆ ಉಪನ್ಯಾಸಕರಿಗೆ ಶೀಘ್ರವೇ ವೇತನ ಪಾವತಿಸಲು ಮರಿತಿಬ್ಬೇಗೌಡರ ಆಗ್ರಹ
ಮೈಸೂರು

ಅತಿಥಿ, ಗುತ್ತಿಗೆ ಉಪನ್ಯಾಸಕರಿಗೆ ಶೀಘ್ರವೇ ವೇತನ ಪಾವತಿಸಲು ಮರಿತಿಬ್ಬೇಗೌಡರ ಆಗ್ರಹ

April 4, 2020

ಮೈಸೂರು, ಏ.3-ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ತವ್ಯ ನಿರ್ವ ಹಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಸರ್ಕಾರಿ ಪಾಲಿ ಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜಿನ ಗುತ್ತಿಗೆ ಉಪನ್ಯಾಸಕ ರಿಗೆ ಕಳೆದ ಹಲವು ತಿಂಗಳಿಂದ ವೇತನ ನೀಡಿಲ್ಲ. ಕೂಡಲೇ ವೇತನ ನೀಡುವಂತೆ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಒತ್ತಾಯಿಸಿದ್ದಾರೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಸಿ.ಎಸ್.ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಮರಿತಿಬ್ಬೇಗೌಡರು, ರಾಜ್ಯದಲ್ಲಿ ಸುಮಾರು 12 ಸಾವಿರ ಮಂದಿ ಅತಿಥಿ ಉಪನ್ಯಾಸಕರಾಗಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ 4-5 ತಿಂಗಳಿನಿಂದಲೂ ವೇತನ ನೀಡಿಲ್ಲ. ಹಾಗೆಯೇ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಿಗೂ ಕಳೆದ 14 ತಿಂಗಳಿಂದ ವೇತನವಿಲ್ಲ. ಇದೀಗ ಕೊರೊನಾ ಲಾಕ್‍ಡೌನ್ ಆಗಿದ್ದು, ಉಪನ್ಯಾಸಕರು ಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ವೇತನ ಪಾವತಿಗೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

50 ದಾಟಿದ ಶಿಕ್ಷಕರಿಗೆ ವಿನಾಯ್ತಿ ನೀಡಿ: ಕೊರೊನಾ ಪರಿಹಾರ ಕಾರ್ಯಗಳಿಂದ 50 ವರ್ಷ ದಾಟಿದ ಶಿಕ್ಷಕ/ಶಿಕ್ಷಕಿಯರಿಗೆ ವಿನಾಯ್ತಿ ನೀಡುವಂತೆಯೂ ಮರಿತಿಬ್ಬೇ ಗೌಡರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರ್ಪಪ ಅವರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ಶಾಲಾ-ಕಾಲೇಜುಗಳಲ್ಲಿ ಶೇ.60ರಷ್ಟು ಮಂದಿ ಶಿಕ್ಷಕಿಯರಿದ್ದಾರೆ. ಬಹಳಷ್ಟು ಮಂದಿ ನಿವೃತ್ತಿಯ ಅಂಚಿನಲ್ಲಿದ್ದಾರೆ. ಆದ್ದರಿಂದ 50 ವರ್ಷ ದಾಟಿದ ಶಿಕ್ಷಕ/ಶಿಕ್ಷಕಿಯರು, ಉಪನ್ಯಾಸಕರಿಗೆ ಕೊರೊನಾ ಪರಿಹಾರ ಉಸ್ತುವಾರಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.

Translate »