ಔಷಧಿ ಅಂಗಡಿಗಳ ಮೇಲೆ ಪ್ರಕರಣ ದಾಖಲು, 20,000 ರೂ. ದಂಡ
ಮೈಸೂರು,ಮಾ.14(ಆರ್‍ಕೆ)- ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದ ನಾಲ್ಕು ಔಷಧ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿರುವ ಡ್ರಗ್ ಕಂಟ್ರೋಲರ್‍ಗಳು, 20,000 ರೂ. ದಂಡ ವಿಧಿಸಿದ್ದಾರೆ.
ಇಂದು ಮೈಸೂರಲ್ಲಿ 20 ಔಷಧ ಅಂಗಡಿಗಳಲ್ಲಿ ತಪಾಸಣೆ ನಡೆಸಿದಾಗ ಮಾಸ್ಕ್ ಹಾಗೂ ಸ್ಯಾನಿಟೈಸರ್‍ಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗು ತ್ತಿದ್ದುದು ಕಂಡು ಬಂದ ಹಿನ್ನೆಲೆಯಲ್ಲಿ ಕಾನೂನು ಮಾಪನಶಾಸ್ತ್ರ ನಿಯಮಗಳಡಿ 4 ಔಷಧ ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಯಿತು.
ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಕೆ.ಎಂ. ಮಹದೇವಸ್ವಾಮಿ, ಇನ್ಸ್‍ಪೆಕ್ಟರ್ ಬಿ.ಎಸ್. ಸುಮಾರಾಣಿ, ಸಹಾಯಕ ಔಷಧ ನಿಯಂತ್ರಕರಾದ ಎಸ್. ನಾಗರಾಜ, ನಾಜಿಯಾ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.