ಶಾಲಾ-ಕಾಲೇಜು, ಥಿಯೇಟರ್, ಕ್ಲಬ್, ಬಾರ್‍ಗಳಲ್ಲಿಮಾಸ್ಕ್ ಕಡ್ಡಾಯ
News

ಶಾಲಾ-ಕಾಲೇಜು, ಥಿಯೇಟರ್, ಕ್ಲಬ್, ಬಾರ್‍ಗಳಲ್ಲಿಮಾಸ್ಕ್ ಕಡ್ಡಾಯ

December 27, 2022

ಬೆಂಗಳೂರು, ಡಿ. 26(ಕೆಎಂಶಿ)- ಶಾಲಾ-ಕಾಲೇಜು, ಸಿನಿಮಾ ಮಂದಿರ, ಕ್ಲಬ್ ಮತ್ತು ಬಾರ್ ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸರ್ಕಾರ ಆದೇಶಿಸಿದೆ.
ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ ಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಉದ್ದೇಶದಿಂದ ತಜ್ಞರೊಟ್ಟಿಗೆ ಸಚಿವರು ಮತ್ತು ಅಧಿಕಾರಿಗಳು ಸಮಾ ಲೋಚನೆ ನಡೆಸಿದ ನಂತರ ಈ ತೀರ್ಮಾನ ಕೈಗೊಂಡಿದೆ. ಸಭೆಯ ನಂತರ ಸುದ್ದಿಗಾರ ರಿಗೆ ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್. ಅಶೋಕ್, ಹೊಸ ವರ್ಷ ಆಚರಣೆ ಬೆಂಗಳೂರು ಸೇರಿದಂತೆ ಎಲ್ಲ ನಗರಗಳಲ್ಲಿ ರಾತ್ರಿ ಒಂದು ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕವಾಗಿ ಸಂಭ್ರಮಾಚರಣೆ ನಡೆಸುವವರು ಕಡ್ಡಾಯ ವಾಗಿ ಮಾಸ್ಕ್ ಧರಿಸಬೇಕು ಹಾಗೂ ಎರಡು ಡೋಸ್ ಲಸಿಕೆ ಪಡೆದಿರಬೇಕು. ಹೊಟೇಲ್ ಗಳಲ್ಲಿ ಎಷ್ಟು ಟೇಬಲ್‍ಗಳಿವೆಯೋ ಅಷ್ಟು ಚೇರ್‍ಗೆ ಮಾತ್ರ ಅನುಮತಿ ನೀಡಲಾಗಿದೆ. ಸಾರ್ವಜನಿಕವಾಗಿ ಸಂಭ್ರಮಾಚರಣೆ ಸಂದರ್ಭದಲ್ಲಿ ಮಕ್ಕಳು ಮತ್ತು ಗರ್ಭಿಣಿಯರು ಭಾಗವಹಿಸದಂತೆ ನಿಷೇಧಿಸಲಾಗಿದೆ. ಚೀನಾ ಮತ್ತು ಬೇರೆ ಬೇರೆ ದೇಶದಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ಹೆಚ್ಚಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇಶದಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾ ಗುತ್ತಿದೆ. ರಾಜ್ಯದ ಸಿನಿಮಾ ಥಿಯೇಟರ್‍ಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಾಲಾ-ಕಾಲೇಜುಗಳ ತರಗತಿಯೊಳಗೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು. ವಿಮಾನದಲ್ಲಿ ಬರುವ ಪ್ರಯಾಣಿಕರ ತಪಾಸಣೆಗಾಗಿ ಮಂಗಳೂರಿನ ವೆನ್‍ಲಾಕ್ ಮತ್ತು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಬ್, ಕ್ಲಬ್, ಬಾರ್, ಶಾಲಾ ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯದ ಜೊತೆಗೆ ಸ್ಯಾನಿಟೈಸರ್ ಬಳಕೆಯೂ ಕಡ್ಡಾಯ. ರೆಸಾರ್ಟ್‍ಗಳಲ್ಲಿ ಕೊರೊನಾ ರೂಲ್ಸ್‍ಗಳನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು. ಬಾರ್ ಸಿಬ್ಬಂದಿ ಮಾತ್ರವಲ್ಲ ಬಾರ್‍ಗೆ ಬರೋ ಗ್ರಾಹಕರೂ ಡಬಲ್ ಡೋಸ್ ಹಾಕಿಸಿಕೊಂಡಿರಬೇಕು. ಈ ರೂಲ್ಸ್ ಪಾರ್ಟಿಗಳಿಗೂ ಅನ್ವಯ ಎಂದು ಸಚಿವ ಅಶೋಕ್ ತಿಳಿಸಿದರು.

Translate »