ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರಿಂದ 34 ಪುರಾವೆ ಸಂಗ್ರಹ
ಮೈಸೂರು

ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರಿಂದ 34 ಪುರಾವೆ ಸಂಗ್ರಹ

August 27, 2021

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಮಾಹಿತಿ

ಮೈಸೂರು,ಆ.೨೬(ಎಂಟಿವೈ)-ಕರ್ನಾಟಕ ಪೊಲೀಸರು ಸಮರ್ಥರಿದ್ದು, ಅತ್ಯಾ ಚಾರ ನಡೆದ ಸ್ಥಳದಲ್ಲಿ ಅತ್ಯಮೂಲ್ಯ ೩೪ ಸಾಕ್ಷö್ಯಗಳನ್ನು ಸಂಗ್ರಹಿಸಿ ದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಮಾಡಲಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಘಟನಾ ಸ್ಥಳದ ಮೊಬೈಲ್ ಟವರ್ ಲೊಕೇಷನ್ ಆಧಾರದಲ್ಲಿ ತನಿಖೆ ಮುಂದುವರೆಸಿ ದ್ದಾರೆ. ಕಲೆ ಹಾಕಿದ ಮೊಬೈಲ್ ನಂಬರ್ ಫಿಲ್ಟರ್ ಮಾಡಿ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಆರೋಪಿಗಳ ಸುಳಿವು ಪತ್ತೆಯಾಗಲಿದೆ ಎಂಬ ವಿಶ್ವಾಸವಿದೆ. ಸಂತ್ರಸ್ತೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದೇನೆ. ಆದರೆ ವೈದ್ಯರ ಸಲಹೆ ಮೇರೆಗೆ ಅವರನ್ನು ಮಾತನಾಡಿಸಲಿಲ್ಲ. ವೈದ್ಯರು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಯುವಕ-ಯುವತಿ ಇಬ್ಬರು ಶಾಕ್‌ನಲ್ಲಿ ದ್ದಾರೆ. ಒಂದೆರಡು ದಿನದದಲ್ಲಿ ಸಹಜ ಸ್ಥಿತಿಗೆ ಬರಲಿದ್ದಾರೆ. ಯುವಕನ ಹಣೆಗೆ ಗಾಯವಾಗಿರುವುದನ್ನು ವೈದ್ಯರು ತಿಳಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ ಎಂದರು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸುಳಿವು ಸಿಕ್ಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕುಡಿದ ಅಮಲಿನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ದ್ದಾರೆ. ನಂತರ ವಿದ್ಯಾರ್ಥಿನಿ ಮೇಲೆ ಅತ್ಯಚಾರವೆಸಗಿದ್ದಾರೆ. ಸದ್ಯ ಪೊಲೀಸರಿಗೆ ಸ್ಥಳದಲ್ಲಿ ೩೪ ಸಾಕ್ಷö್ಯಗಳು ಸಿಕ್ಕಿವೆ. ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಆಯೋಗ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದೆ. ಇದೊಂದು ಹೇಯ ಕೃತ್ಯ. ಇಂತಹ ಕೃತ್ಯಗಳು ನಡೆಯ ಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಪಿಯಿಂದ ಮಾಹಿತಿ: ಘಟನಾ ಸ್ಥಳಕ್ಕೆ ತೆರಳಿದ್ದ ಪ್ರಮಿಳಾ ನಾಯ್ಡು ಅವರಿಗೆ ಡಿಸಿಪಿ ಗೀತಾ ಪ್ರಸನ್ನ ಅವರು ಘಟನೆ ಬಗ್ಗೆ ಮಾಹಿತಿ ನೀಡಿದರು.
ಮಾಜಿ ಶಾಸಕರ ಭೇಟಿ: ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದ ಸ್ಥಳಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದು ಬಿಜೆಪಿ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯ. ಮೈಸೂರು ನಗರವನ್ನು ಪೆನ್ಷನರ್ ಪ್ಯಾರಡೈಸ್ ಎಂದು ಕರೆಯುತ್ತಿದ್ದರು. ಆದರೆ ಇದೀಗ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಕೇವಲ ೩೬ ಗಂಟೆಯೊಳಗೆ ಎರಡು ಬೆಚ್ಚಿಬೀಳಿಸುವ ಘಟನೆಗಳು ನಡೆದಿವೆ. ನಿಜಕ್ಕೂ ಇದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.

Translate »