ಇಂದು ಬೃಹತ್ ಕೊರೊನಾ ಲಸಿಕಾ ಅಭಿಯಾನ
ಮೈಸೂರು

ಇಂದು ಬೃಹತ್ ಕೊರೊನಾ ಲಸಿಕಾ ಅಭಿಯಾನ

September 17, 2021

ಮೈಸೂರು, ಸೆ.16(ಆರ್‍ಕೆ)-ಮೈಸೂರು ಜಿಲ್ಲೆಯಲ್ಲಿ ನಾಳೆ(ಸೆ.17) ನಡೆಯಲಿರುವ ಬೃಹತ್ ಕೊರೊನಾ ಲಸಿಕಾ ಅಭಿಯಾನ ವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ನಡೆಯಲಿರುವ ವಿಶೇಷ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಿ, ಹೆಚ್ಚು ಮಂದಿಗೆ ಲಸಿಕೆ ನೀಡಬೇಕೆಂದು ಸಚಿವರು ತಿಳಿಸಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆ ಶೇ.100 ರಷ್ಟು ಲಸಿಕೆ ನೀಡುವ ಗುರಿ ಹೊಂದಿದ್ದು, ಮೈಸೂರು ಜಿಲ್ಲೆಯಲ್ಲಿ 1.25 ಲಕ್ಷ ಮಂದಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಲಾಗಿದೆ. ಸಾರ್ವಜನಿಕರು ಈ ಅವಕಾಶ ಬಳಸಿ ಕೊಂಡು ಕೊರೊನಾ ವೈರಸ್ ಸೋಂಕನ್ನು ದೂರ ಮಾಡಬೇಕೆಂದು ತಿಳಿಸಿದರು.
ಮೈಸೂರಿನ 315 ಸೇರಿದಂತೆ ಜಿಲ್ಲೆಯಾ ದ್ಯಂತ ಒಟ್ಟು 600 ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಲಾಗಿದ್ದು, ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಎಲ್ಲಾ ಪ್ರಾಥ ಮಿಕ, ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಆಸ್ಪತ್ರೆಗಳಲ್ಲಿ ಅಭಿಯಾನ ಹಮ್ಮಿ ಕೊಳ್ಳಲಾಗಿದೆ. ಶಾಸಕರಾದ ಎಸ್.ಎ.ರಾಮ ದಾಸ್, ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ಸುನಂದಾ ಪಾಲನೇತ್ರ, ಮೈಲ್ಯಾಕ್ ಅಧ್ಯಕ್ಷ ಎನ್.ವಿ.ಫಣೀಶ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯ್ತಿ ಸಿಇಓ ಎ.ಎಂ.ಯೋಗೀಶ್, ಜಿಲ್ಲಾ ಆರೋ ಗ್ಯಾಧಿಕಾರಿ ಡಾ. ಕೆ.ಹೆಚ್.ಪ್ರಸಾದ್, ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ, ನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಹಲವರು ಈ ಸಂದರ್ಭ ದಲ್ಲಿ ಉಪಸ್ಥಿತರಿದ್ದರು.

Translate »