ಕೊರೊನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ
ಮೈಸೂರು

ಕೊರೊನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ

August 30, 2021

ಹುಬ್ಬಳ್ಳಿ: ಕೊರೊನಾ ನಿಗ್ರಹ ವಿಚಾರದಲ್ಲಿ ರಾಜ್ಯ ಮಟ್ಟದಲ್ಲಿ ಭಾರಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಅದರ ಪರಿ ಣಾಮವಾಗಿ ನಾಯ ಕತ್ವ ಬದಲಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆ ಯಲ್ಲಿ ಬಿಜೆಪಿ ಹೈಕಮಾಂಡ್ ಯಡಿ ಯೂರಪ್ಪ ಅವರನ್ನು ಬದಲಾವಣೆ ಮಾಡಿ ನೂತನ ಮುಖ್ಯಮಂತ್ರಿಯನ್ನು ನೇಮಕ ಮಾಡಿ ತನ್ನ ಕೆಲಸ ಮುಗಿ ಯಿತೆಂದು ಕೈತೊಳೆದಿದೆ ಎಂದು ಲೇವಡಿ ಮಾಡಿದರು.

 

Translate »