ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್‍ನಲ್ಲಿ ಗ್ರಾಪಂ ನೌಕರರ ಭಾರೀ ಪ್ರತಿಭಟನೆ
ಕೊಡಗು

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್‍ನಲ್ಲಿ ಗ್ರಾಪಂ ನೌಕರರ ಭಾರೀ ಪ್ರತಿಭಟನೆ

November 17, 2022

ಮಡಿಕೇರಿ,ನ.16- ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ, ಜನಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಸರ್ಕಾರ ಕನಿಷ್ಠ ವೇತನ ನೀಡದೆ ವಂಚಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಗ್ರಾಪಂ ನೌಕರರ ಸಂಘದ ಸಭೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿಸೆಂಬರ್ ತಿಂಗಳಿನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಿ ಸರ್ಕಾರದ ಗಮನ ಸೆಳೆಯಲು ನಿರ್ಧಾರ ಕೈಗೊಳ್ಳಲಾಯಿತು.

ಗ್ರಾಪಂ ನೌಕರರಿಗೆ ಕನಿಷ್ಠ ವೇತನ ನೀಡಲು ಕ್ರಮ ಕೈಗೊಳ್ಳಬೇಕು, ಎಲ್ಲಾ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕು, ಪಿಂಚಣಿ ಸೌಲಭ್ಯ ನೀಡಬೇಕು, ಕಾರ್ಮಿಕ ಇಲಾಖೆಯ ನಿಯಮದಂತೆ ವೇತನ ಪರಿಷ್ಕ ರಣೆ ಮಾಡÀಬೇಕು ಸೇರಿದಂತೆ ವಿವಿಧ ಬೇಡಿಕೆ ಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಗ್ರಾಪಂ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಡೇಗೌಡ ಮಾತ ನಾಡಿ, ಕೋವಿಡ್ ಸಂಕಷ್ಟದ ಸಂದರ್ಭ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿದ್ದ ನೌಕರ ರನ್ನು ಸೇವೆಯಿಂದ ಕೈಬಿಡಲಾಗಿದ್ದು, ಸಾಕಷ್ಟು ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದ್ದರೂ ವೇತನ ಹೆಚ್ಚಳ ಮಾಡದ ಸರ್ಕಾರ ದುಡಿಯುವ ವರ್ಗ ವನ್ನು ನಿರ್ಲಕ್ಷ್ಯದಿಂದ ನೋಡುತ್ತಿದೆ ಎಂದು ಆರೋಪಿಸಿದÀರು. ಕಾರ್ಮಿಕರ ಶ್ರಮವನ್ನು ಸರ್ಕಾರ ಅರಿತುಕೊಳ್ಳಬೇಕಿದೆ. ಗ್ರಾ.ಪಂ ನೌಕರರ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಡಿಸೆಂಬರ್ ತಿಂಗಳಿನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದರು.

ಸಿಐಟಿಯುನ 17ನೇ ಅಖಿಲ ಭಾರತ ಸಮ್ಮೇಳನವು ಜ.18ರಿಂದ 22ರವರೆಗೆ ಬೆಂಗ ಳೂರಿನಲ್ಲಿ ನಡೆಯಲಿದ್ದು, ಸಮ್ಮೇಳನಕ್ಕೆ ಕೊಡಗು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಕಾರ್ಮಿಕರ ಬೇಡಿಕೆಗಳ ಕುರಿತು ಸರ್ಕಾರದ ಜೊತೆ ನಿರಂತರ ಚರ್ಚೆ ನಡೆಸಿ ಬೇಡಿಕೆಗಳ ಈಡೇ ರಿಕೆಗಾಗಿ ಪ್ರಯತ್ನಿಸಲಾಗುವುದೆಂದರು.

ಗ್ರಾ.ಪಂ ನೌಕರರು ವನ್ಯಜೀವಿ ದಾಳಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿ ಸುತ್ತಿದ್ದು, ರೈತಸಂಘ ನ.21ರಂದು ಆನೆದಾಳಿ ನಿಯಂತ್ರಣಕ್ಕೆ ಒತ್ತಾಯಿಸಿ ನಡೆಸಲಿರುವ ಹೋರಾಟಕ್ಕೆ ಬೆಂಬಲ ಸೂಚಿಸುವುದಾಗಿ ನಾಡೇಗೌಡ ಇದೇ ಸಂದರ್ಭ ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಮಾತನಾಡಿ, ಗ್ರಾಪಂಗಳಲ್ಲಿ ದುಡಿಯುವ ನೌಕರರಿಗೆ ಕುಶಲತೆಯ ಆಧಾರದಲ್ಲಿ `ಸಮಾನ ಕೆಲಸಕ್ಕೆ ಸಮಾನ ವೇತನ’ ನಿಗಧಿ ಪಡಿಸಬೇಕು. ನೌಕರರ ಸೇವಾ ಅವಧಿಗೆ ಮಾನ್ಯತೆ ನೀಡುವ ರೀತಿಯಲ್ಲಿ ನಿಗಧಿ ಪಡಿಸಲಾಗಿರುವ ಮೂಲ ವೇತನದಲ್ಲಿ ಹೆಚ್ಚಳ ವಾಗಬೇಕೆಂದು ಆಗ್ರಹಿಸಿದರು. ಕಾರ್ಮಿಕ ರನ್ನು ಖಾಯಂಗೊಳಿಸದೇ ಅತ್ಯಂತ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಕಾರ್ಮಿಕರ ಸೇವಾ ನಿಯಮಾವಳಿಗಳಲ್ಲಿ ತಿದ್ದಪಡಿಯಾಗಬೇಕು ಎಂದರು. ಗುತ್ತಿಗೆ ಆಧಾರದ ಪದ್ಧತಿಯನ್ನು ಕೈಬಿಡಬೇಕು, ನೌಕರರಿಗೆ ಕನಿಷ್ಠ ವೇತನ ನಿಗದಿ ಪಡಿಸಬೇಕು, ತುಟ್ಟಿ ಭತ್ಯೆ ಮತ್ತು ಬಾಕಿ ಉಳಿಸಿಕೊಂಡಿರುವ ವೇತನ ಬಿಡುಗಡೆ ಮಾಡಬೇಕು ಹಾಗೂ ನಿವೃತ್ತಿಯಾದ ನೌಕರರಿಗೆ ಉಪಧನ ನೀಡ ಬೇಕೆಂದು ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅಧ್ಯಕ್ಷತೆಯಲ್ಲಿ ನಡೆದ ಸಭೆ ಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಕುಶಾಲನಗರ ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯ್, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಹೆಚ್.ಬಿ.ಹರೀಶ್ ಸೇರಿದಂತೆ ಮುಖಂಡರು ಹಾಗೂ ಗ್ರಾ.ಪಂ ನೌಕರರು ಪಾಲ್ಗೊಂಡಿದ್ದರು.

Translate »