ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ
ಕೊಡಗು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ

January 6, 2020

ಸಿದ್ದಾಪುರ, ಜ.5- ಕೇಂದ್ರ ಸರಕಾರ ಜಾರಿಗೆ ತಂದಿರುವ ಸಿಎಎ, ಎನ್‍ಆರ್‍ಸಿ ಹಾಗೂ ಎನ್‍ಪಿಆರ್ ವಿರೋಧಿಸಿ ಸಿದ್ದಾ ಪುರದ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಇಲ್ಲಿಯ ಚರ್ಚ್ ಮೈದಾನದಲ್ಲಿ ಸಮಿತಿಯ ಅಧ್ಯಕ್ಷ ಕೆ.ಯು ಅಬ್ದುಲ್ ಮಜೀದ್ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.

ಇದೇ ಸಂದರ್ಭದಲ್ಲಿ ಹೋರಾಟದಲ್ಲಿ ಹುತಾತ್ಮರಾದವರಿಗೆ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು. ಮಹಾತ್ಮಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಭಾವ ಚಿತ್ರ ಹಾಗೂ ರಾಷ್ಟ್ರಧ್ವಜ ಹಿಡಿದುಕೊಂಡು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದರು.

ಸಮಾವೇಶದಲ್ಲಿ ಸಂವಿಧಾನ ವಿರೋಧಿ ಕಾಯ್ದೆಯನ್ನು ಸರಕಾರ ಹಿಂಪಡೆಯುವವ ರೆಗೂ ನಿರಂತರ ಚಳುವಳಿಯನ್ನು ರೂಪಿಸ ಬೇಕೆಂದು ಪ್ರಮುಖರು ಕರೆ ನೀಡಿದರು.

ಜಿಪಂ ಮಾಜಿ ಸದಸ್ಯ ವಿ.ಪಿ ಶಶಿಧರ್ ಮಾತನಾಡಿ, ಗೋಡ್ಸೆಯ ಹಿಂದುಗಳು ದೇಶದಲ್ಲಿ ಧರ್ಮಾಧಾರಿತವಾಗಿ ಕಾಯ್ದೆ ಗಳನ್ನು ತರುವ ಮೂಲಕ ದೇಶದಲ್ಲಿ ಒಡೆದು ಆಳುವ ಷಡ್ಯಂತರ ಮಾಡುತ್ತಿದ್ದಾರೆ. ಜಾತ್ಯಾ ತೀತ ಭಾರತಿಯರು ಕೋಮುವಾದಿ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಬೇಕೆಂದು ಕರೆ ನೀಡಿದ ಅವರು, ಕೇಂದ್ರ ಸರ್ಕಾರ ಜಾತಿ, ಭಾಷೆ ಆಧಾರ ದಲ್ಲಿ ಸಂಘರ್ಷವನ್ನು ದೇಶದಲ್ಲಿ ಸೃಷ್ಟಿಸುತ್ತಿದೆ.

ದೇಶದಲ್ಲಿ ಜನಾಂಗವನ್ನು ಬೇರ್ಪಡಿಸಿ ಅಶಾಂತಿ ಸೃಷ್ಠಿಸುತ್ತಿರುವ ಕೇಂದ್ರ ಸರ್ಕಾರವು ಅನಗತ್ಯವಾಗಿ ಸಂವಿಧಾನ ವಿರೋಧಿ ನೀತಿ ಗಳನ್ನು ಜಾರಿಗೆ ತರುತ್ತಿರುವುದರ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಪ್ರತಿಭಟನೆ ಮಾಡುವ ಮೂಲಕ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಬೇಕಿದೆ ಎಂದರು.

ಕಾರ್ಮಿಕ ಮುಖಂಡ ಪಿ.ಆರ್.ಭರತ್ ಮಾತನಾಡಿ, ಕೈಗಾರಿಕಾ ಕೇಂದ್ರಗಳು ಮುಚ್ಚುವ ಹಂತದಲ್ಲಿದೆ ದಿನನಿತ್ಯ ದುಡಿ ಯುವ ಕಾರ್ಮಿಕ ಕುಟುಂಬಗಳು ಅನಾಥ ವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇ ಕಾದ ಸರ್ಕಾರ ಜನರ ಭಾವನೆಯನ್ನು ಕೆರಳಿಸಿ ಅಧಿಕಾರ ನಡೆಸುತ್ತಿರುವುದು ಸರಿ ಯಾದ ನಡೆಯಲ್ಲ. ಸಂವಿಧಾನ ವಿರೋಧಿ ಕಾಯಿದೆಗಳನ್ನು ಹಿಂಪಡೆದುಕೊಂಡು ಜಾತ್ಯತೀತ ರಾಷ್ಟ್ರವನ್ನು ಕಟ್ಟಲು ಮುಂದಾಗ ಬೇಕೆಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್.ವೆಂಕಟೇಶ್ ಮಾತನಾಡಿ, ಸಂವಿ ಧಾನದ ರಕ್ಷಣೆ ಮಾಡಬೇಕಾದ ಕೇಂದ್ರ ಸರ್ಕಾರವು ಇತ್ತೀಚೆಗೆ ಅನಗತ್ಯವಾಗಿ ಕಾಯ್ದೆ ಗಳನ್ನು ಜಾರಿಗೆ ತಂದು ಜನರನ್ನು ಶೋಷಣೆ ಮಾಡುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಭಾರತೀಯ ರಾದ ನಾವೆಲ್ಲರೂ ಒಂದೇ ಆದರೆ ಕೇಂದ್ರ ಸರ್ಕಾರವು ಜನ ವಿರೋಧಿ ನೀತಿ ಅನು ಸರಿಸುತ್ತಿದ್ದು ಇದರ ವಿರುದ್ಧ ಕಾಂಗ್ರೆಸ್ ಪಕ್ಷವು ಜಾತಿ ಭೇದವಿಲ್ಲದೇ ನಿರಂತರ ವಾಗಿ ಹೋರಾಟವನ್ನು ನಡೆಸುತ್ತಿದೆ ಎಂದು ತಿಳಿಸಿದರು.

ಸಿದ್ದಾಪುರದ ಮಸೀದಿಯ ಖತೀಬ್ ನೌಫಲ್ ಹುದವಿ ಮಾತನಾಡಿ, ಕೇಂದ್ರ ಸರ್ಕಾರವು ಜಾತಿ ಸಂಘರ್ಷ ಮಾಡಲು ಯತ್ನಿಸುತ್ತಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರು ದೇಶ ದಲ್ಲಿ ಜಾತಿ ಧರ್ಮಗಳ ಹೆಸರಿನಲ್ಲಿ ಅಶಾಂತಿ ಸೃಷ್ಠಿಸಿದ್ದಾರೆ ಎಂದು ದೂರಿದರು.

ಸಾಮಾಜಿಕ ಕಾರ್ಯಕರ್ತ ಎ.ಎಸ್. ಮುಸ್ತಫ ಪ್ರಸ್ತಾವಿಕ ಮಾತನಾಡಿ, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಸಂವಿಧಾನ ವಿರೋಧಿ ಹಾಗೂ ಮನುಷ್ಯ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದೇಶದಲ್ಲಿ ಧರ್ಮಾ ಧಾರಿತ ಪೌರತ್ವವನ್ನು ಜಾರಿಗೆ ತರುತ್ತಿರು ವುದು ಖಂಡನೀಯ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೆ.ಯು. ಅಬ್ದುಲ್ ಮಜೀದ್ ವಹಿಸಿದ್ದರು. ವೇದಿಕೆ ಯಲ್ಲಿ ಸಿದ್ದಾಪುರ ಮುಸ್ಲಿಂ ಜಮಾಆತ್ ಅಧ್ಯಕ್ಷ ಅಧ್ಯಕ್ಷ ಕೆ.ಉಸ್ಮಾನ್ ಹಾಜಿ, ಗ್ರಾಪಂ ಅಧ್ಯಕ್ಷ ಎಂ.ಕೆ.ಮಣಿ, ಸಮಾಜ ಸೇವಕ ಜೋಸೆಫ್ ಶ್ಯಾಂ, ತೌಸಿಫ್, ಪಿ.ಎಂ.ಖಾಸೀಂ ಹಾಗೂ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು. ಸಭೆಯಲ್ಲಿ ಎಂ.ಎಸ್.ಮುಸ್ತಫಾ ಸ್ವಾಗತಿಸಿದರು. ಎಂ.ಎ.ಅಜೀಜ್ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ವಂದಿಸಿದರು. ಇದೇ ಸಂದರ್ಭದಲ್ಲಿ ಸಿದ್ದಾಪುರದ ಪಿಡಿಓ ವಿಶ್ವನಾಥ್ ಅವರಿಗೆ ಮನವಿ ಪತ್ರವನ್ನು ನೀಡಲಾಯಿತು. ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ಠಾಣಾಧಿಕಾರಿ ಬೋಜಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Translate »