ಮೈಸೂರು ಡಿಸಿ ಕಚೇರಿ ಬಳಿ ಅಂಗನವಾಡಿ ನೌಕರರ ಭಾರೀ ಪ್ರತಿಭಟನೆ

ಮೈಸೂರು, ಜು.10(ಆರ್‍ಕೆಬಿ)- ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ಪ್ರಾರಂಭಿಸಬೇಕು. ಬಾಕಿ ಗೌರವ ಧನ, ಕೋಳಿ ಮೊಟ್ಟೆ, ತರಕಾರಿ ಹಣ ಬಿಡುಗಡೆ, ಕೇಂದ್ರ ಸರ್ಕಾರದಿಂದ 2018ರ ಅಕ್ಟೋ ಬರ್‍ನಲ್ಲಿ ಹೆಚ್ಚಳವಾದ ಗೌರವ ಧನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರ ಹಿಸಿ ನೂರಾರು ಅಂಗನವಾಡಿ ನೌಕರರು ಬುಧವಾರ ಮೈಸೂರು ಡಿಸಿ ಕಚೇರಿ ಬಳಿ ಧರಣಿ ನಡೆಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಮೈಸೂರು ಜಿಲ್ಲಾ ಸಮಿತಿ ಆಶ್ರಯ ದಲ್ಲಿ ನಡೆದ ಪ್ರತಿಭಟನೆ ವೇಳೆ ನೌಕರರು ತಮ್ಮ ಬೇಡಿಕೆಗಳ ಸಂಬಂಧ ಘೋಷಣೆಗಳನ್ನು ಕೂಗಿ ದರು. ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆದ, ಮೈಸೂರು ಜಿಲ್ಲಾ ಸಮಿತಿ ಅಧ್ಯಕ್ಷೆ ಹೆಚ್.ಎಸ್.ಸುನಂದಾ, ಪ್ರಧಾನ ಕಾರ್ಯ ದರ್ಶಿ ಕೆ.ಪಿ.ಕಾವೇರಮ್ಮ ಇನ್ನಿತರರ ನೇತೃತ್ವದಲ್ಲಿ ಧರಣಿ ನಡೆಯಿತು. ತಮ್ಮ ಬೇಡಿಕೆಗಳ ಈಡೇರಿಕೆಗೆ ಹಲವು ಬಾರಿ ಪ್ರತಿಭಟನೆ, ಮನವಿ, ಪತ್ರ ವ್ಯವಹಾರ ನಡೆಸಿ ದ್ದರೂ ರಾಜ್ಯ ಸರ್ಕಾರ ನಮ್ಮತ್ತ ನೋಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ ಎಂದು ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದÀರು. ನಮ್ಮೆಲ್ಲ ಬೇಡಿಕೆ ಗಳ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸು ವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವು ದಿಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾಧಿಕಾರಿ, ಜಿಪಂ ಸಿಇಓ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರತಿಭಟನಾ ಸ್ಥಳಕ್ಕೆ ಆಗಮಿಸ ಬೇಕು ಎಂದು ಆಗ್ರಹಿಸಿ, ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದಾ, ಅಂಗನ ವಾಡಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿ ಗೆಯ ಜೊತೆಗೆ ಅವರ ಆರಂಭಿಕ ಶಿಕ್ಷಣ, ಆಟ ಇನ್ನಿ ತರ ಚಟುವಟಿಕೆಗಳ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಉಂಟು ಮಾಡುವ ಮಹತ್ವದ ಕೆಲಸವನ್ನು ಅಂಗನವಾಡಿ ನೌಕ ರರು ಮಾಡುತ್ತಾ ಬಂದಿದ್ದಾರೆ. ರಾಜ್ಯದ ಮಾನವ ಸಂಪನ್ಮೂಲಗಳ ಬೆಳವಣಿಗೆಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂತಹ ಯೋಜನೆಯನ್ನು ಸಬಲೀ ಕರಿಸುವ ಬದಲಿಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಯನ್ನು ಹೆಚ್ಚಿಸಲು ಅಂಗನವಾಡಿ ಕೇಂದ್ರದಲ್ಲಿ ನಿರ್ವಹಿಸ ಬೇಕಾದ ಜವಾಬ್ದಾರಿಯನ್ನು ಸರ್ಕಾರಿ ಶಾಲೆಗಳು ನಿರ್ವಹಿಸುವುದು ಪ್ರಾಯೋಗಿಕವಲ್ಲ. ಆದ್ದರಿಂದ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‍ಕೆಜಿ-ಯುಕೆಜಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಜು.18ರಂದು ಸಭೆ ನಡೆಸುವ ಭರವಸೆ: ಮಧ್ಯಾಹ್ನದ ವೇಳೆಗೆ ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪದ್ಮಾ ಆಗಮಿಸಿ, ಪ್ರತಿಭಟನಾ ನಿರತ ನೌಕರರ ಬೇಡಿಕೆಗಳನ್ನು ಆಲಿಸಿದರು. ಜು.18 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಓ, ಉಪಕಾರ್ಯದರ್ಶಿ, ಇಲಾಖೆ ಉಪ ನಿರ್ದೇಶಕರ ಸಭೆ ಕರೆದು ಈ ಕುರಿತು ಸಭೆ ನಡೆಸುವುದಾಗಿ ಭರವಸೆ ನೀಡಿದರು. ಪ್ರತಿಭಟನೆ ಯಲ್ಲಿ ಸಂಘದ ಪದಾಧಿಕಾರಿಗಳಾದ ಧರ್ಮಾವತಿ, ಮಂಗಳಗೌರಮ್ಮ, ಪುಷ್ಪಲತಾ, ವಸಂತ, ವಿಜಯ, ಮಂಜುಳಾ, ಅಜಿತಾ, ಲೀಲಾವತಿ, ನೀಲಮ್ಮ, ರಾಣಿ, ಪುಷ್ಪಾ, ಲಕ್ಷ್ಮಿ ಇನ್ನಿತರರು ಭಾಗವಹಿಸಿದ್ದರು.