ರಾಜ್ಯ ಸರ್ಕಾರಿ ನಿವೃತ್ತ ನೌಕರರಿಂದ ಫೆ.19ಕ್ಕೆ ಬೆಂಗಳೂರಲ್ಲಿ ಬೃಹತ್ ರ್ಯಾಲಿ
ಮೈಸೂರು

ರಾಜ್ಯ ಸರ್ಕಾರಿ ನಿವೃತ್ತ ನೌಕರರಿಂದ ಫೆ.19ಕ್ಕೆ ಬೆಂಗಳೂರಲ್ಲಿ ಬೃಹತ್ ರ್ಯಾಲಿ

February 6, 2020

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ `ಸರ್ಕಾರಿ ನಿವೃತ್ತ ನೌಕರರ ನಡೆ ವಿಧಾನಸೌಧದ ಕಡೆ’
ಮೈಸೂರು, ಫೆ.5(ಪಿಎಂ)- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾ ಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ಫೆ.19ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳ ಲಾಗಿದೆ ಎಂದು ಸಂಘದ ಮೈಸೂರು ಜಿಲ್ಲಾಧ್ಯಕ್ಷ ಎನ್.ಓಬಯ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಫೆ.19ರ ಬೆಳಿಗ್ಗೆ 10ಕ್ಕೆ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ `ಸರ್ಕಾರಿ ನಿವೃತ್ತ ನೌಕರರ ನಡೆ ವಿಧಾನಸೌಧದ ಕಡೆ’ ಜಾಥಾ ನಡೆಸ ಲಾಗುವುದು. ಬಳಿಕ ಪಾರ್ಕ್‍ನಲ್ಲಿ ಸಮಾವೇಶ ನಡೆಸಲಾಗುವುದು ಎಂದರು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ 25 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸಿ ಹೋರಾಟದಲ್ಲಿ ಭಾಗವಹಿಸಲಿ ದ್ದಾರೆ. ಮೈಸೂರು ಜಿಲ್ಲೆಯಿಂದ 500 ಮಂದಿ ಅಂದು ಬೆಳಿಗ್ಗೆ 6.45ಕ್ಕೆ ಚಾಮುಂಡಿ ಎಕ್ಸ್‍ಪ್ರೆಸ್ ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು. ಸದಸ್ಯರು ಉಪಾಹಾರ, ರೈಲು ಟಿಕೆಟ್‍ಗಾಗಿ ಒಟ್ಟು 200 ರೂ. ಮುಂಗಡ ಪಾವತಿಸಬೇಕು ಎಂದು ಕೋರಿದರು. ಪ್ರಧಾನ ಕಾರ್ಯದರ್ಶಿ ಬಿ.ಆರ್.ಉಮಾ ಕಾಂತ್, ಖಜಾಂಚಿ ಕೆ.ಎಂ.ನಾಗರಾಜ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

Translate »