ಬೆಂಗಳೂರಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ಮಾಸ್ಟರ್ ಪ್ಲಾನ್
News

ಬೆಂಗಳೂರಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಣೆಗೆ ಮಾಸ್ಟರ್ ಪ್ಲಾನ್

October 19, 2021

ಬೆಂಗಳೂರು, ಅ. 18(ಕೆಎಂಶಿ)- ನಗರದ ಒಳ ಚರಂಡಿ ವ್ಯವಸ್ಥೆ ಸರಿಪಡಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು.

ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆಗಳ ಸಂಗ್ರಹ ಸಾಮಥ್ರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮೇಲ್ಮಟ್ಟದಿಂದ 15-20 ಕೆರೆಗಳ ನೀರು ಅಗರ ಕೆರೆಗೆ ಹರಿದು ಬರುತ್ತಿದೆ. ಇದನ್ನು ತಡೆಗಟ್ಟಿ ಕೆರೆ ಸಂಗ್ರಹ ಸಾಮಥ್ರ್ಯ ಹೆಚ್ಚಿಸಲು ಮುಖ್ಯ ಚರಂಡಿ ದುರಸ್ತಿಗೆ ಸೂಚನೆ ನೀಡ ಲಾಗಿದೆ. ಒಳಚರಂಡಿ ಹಾಗೂ ಕೊಳಚೆ ನೀರನ್ನು ಪ್ರತ್ಯೇಕ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಬಡಾ ವಣೆಗಳಲ್ಲಿ ಯುಜಿಡಿ ಲೆವೆಲ್‍ಗಳಲ್ಲಿ ವ್ಯತ್ಯಾಸ ಉಂಟಾಗಿದ್ದು, ಇದನ್ನು ಸರಿಪಡಿಸಲು ಸೂಚಿಸಲಾಗಿದೆ. ಸಂಸ್ಕರಿತ ನೀರು ಚರಂಡಿಗೆ ಸೇರುತ್ತಿರುವುದನ್ನು ಗಮನಿಸಿದ್ದು, ತಕ್ಷಣವೇ ಇದನ್ನು ಸರಿಪಡಿಸಿ, ನೇರವಾಗಿ ಕೆರೆಗಳಿಗೆ ಹರಿಸಬೇಕೆಂದು ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಮಡಿವಾಳ ಕೆರೆಗೆ ಹೊಂದಿಕೊಂಡಂತೆ ಇರುವ 4 ಎಂ.ಎಲ್.ಡಿ ಎಸ್.ಟಿ.ಪಿ ಘಟಕ ಕಾರ್ಯಾ ರಂಭ ಮಾಡಿಲ್ಲ, 4-5 ತಿಂಗಳ ಅವಧಿಯಲ್ಲಿ ಸಂಪೂರ್ಣ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ. ಬಿಬಿಎಂಪಿ, ಬೆಸ್ಕಾಂ, ಬಿ.ಡಬ್ಲೂಎಸ್.ಎಸ್.ಬಿ. ಸಂಸ್ಥೆ ಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚಿಸ ಲಾಗಿದೆ. ಗುಂಡಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು, ಸಮಸ್ಯೆ ಬಗೆಹರಿಸಲು ಸಭೆ ಕರೆದು ಪರಿಶೀಲಿಸಲಾಗುವುದು. ಸತತ ಮಳೆಯಿಂ ದಾಗಿ ದುರಸ್ತಿ ಸಾಧ್ಯವಾಗುತ್ತಿಲ್ಲ. ಮಳೆ ಬಿಡುವು ನೀಡಿದ ಕೂಡಲೇ ಗುಂಡಿಗಳನ್ನು ಮುಚ್ಚಲು ಸಮರೋಪಾದಿ ಯಲ್ಲಿ ಕ್ರಮವಹಿಸಲಾಗುವುದು ಎಂದರು

Translate »